ಬುಧವಾರ, ಸೆಪ್ಟೆಂಬರ್ 22, 2021
23 °C

ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ: ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ‘ಜಿಲ್ಲೆಯ ಆರೋಗ್ಯ ಕ್ಷೇತ್ರ ಸುಧಾರಣೆಯ ನಿಟ್ಟಿನಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಂಡಿದ್ದು, ರಾಜ್ಯದಲ್ಲಿಯೇ ಮಾದರಿಯಾಗಿದೆ‘ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.

ಅವರು ತಾಲ್ಲೂಕಿನ ಬಂಡಿಹರ್ಲಾಪುರ ಗ್ರಾಮದಲ್ಲಿ ಬುಧವಾರ ₹ 1.45 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

‘ಈ ಭಾಗದ ಬಹುದಿನದ ಕನಸು ಈಡೇರಿಸಿದ ಸಂತೃಪ್ತಿ ನಮಗೆ ಇದೆ. ಆರೋಗ್ಯ ಕೇಂದ್ರಕ್ಕೆ ಇನ್ನೂ ಹೆಚ್ಚಿನ ಸೌಲಭ್ಯ ಒದಗಿಸುವ ಮೂಲಕ ಗ್ರಾಮೀಣ ಜನರಿಗೆ ಸೇವೆ ನೀಡಲು ಸಜ್ಜುಗೊಳಿಸಲಾಗುವುದು‘ ಎಂದರು.

ಕೊಪ್ಪಳದಲ್ಲಿ ವೈದ್ಯಕೀಯ ಕಾಲೇಜಿನ ಸಮೀಪದಲ್ಲಿ ₹ 145 ಕೋಟಿ ವೆಚ್ಚದಲ್ಲಿ ಸಾವಿರ ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ಇದು ಮೂರು, ನಾಲ್ಕು ಜಿಲ್ಲೆಗಳಿಗೆ ಮಾದರಿ ಆಸ್ಪತ್ರೆ ಆಗಿದೆ. ಹೆರಿಗೆ ಆಸ್ಪತ್ರೆ, ತಾಯಿ, ಮಗು ಆಸ್ಪತ್ರೆ ಈಗಾಗಲೇ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ನಗರದಲ್ಲಿ ಏಮ್ಸ್‌ ರೀತಿಯಲ್ಲಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂಬ ಕನಸು ನಮ್ಮದಾಗಿದೆ’ ಎಂದರು.

‘ಕೊಪ್ಪಳ ವಿಧಾನಸಭೆ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ರೂಪಿಸಲಾಗುತ್ತಿದೆ. ನನ್ನ ಅವಧಿಯಲ್ಲಿಯೇ ಅನೇಕ ಅಭಿವೃದ್ಧಿ ಕಾರ್ಯಗಳು ಆಗಿವೆ’ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಚನ್ನಕೃಷ್ಣ ಗೊಲ್ಲರ್, ಮುಖಂಡರಾದ ಕೆ.ಚಂದ್ರಶೇಖರ್, ದೇವಪ್ಪ ಮೆಕಾಳಿ, ಅಬ್ಬುಲಿಗೆಪ್ಪ, ಮೋಹನ್, ಕುರಗೋಡ ರವಿ, ಟಿಎಚ್ ಓ ರಾಮಾಂಜನೇಯ, ಡಾ.ಮಂಜುಳ ಶರ್ಮಾ, ಡಾ.ಮಾಧವಿ ಹಾಗೂ ನಿರ್ಮಿತ ಕೇಂದ್ರದ ಅಧಿಕಾರಿ ಸುರೇಶ್ ಮುಂತಾದವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.