ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲ್ಯಾಣ ಕರ್ನಾಟಕ ಉತ್ಸವ | ಧ್ವಜಾರೋಹಣಕ್ಕೆ ತೆರಳುತ್ತಿದ್ದ PDO ಅಪಘಾತದಲ್ಲಿ ಸಾವು

Published : 17 ಸೆಪ್ಟೆಂಬರ್ 2024, 7:47 IST
Last Updated : 17 ಸೆಪ್ಟೆಂಬರ್ 2024, 7:47 IST
ಫಾಲೋ ಮಾಡಿ
Comments

ಕೊಪ್ಪಳ: ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣಕ್ಕೆ ತೆರಳುತ್ತಿದ್ದ ಜಿಲ್ಲೆಯ ಕುಕನೂರು ತಾಲ್ಲೂಕಿನ ಯರೇಹಂಚಿನಾಳ ಗ್ರಾಮದ ಪಿಡಿಒ ಅಡಿವೆಪ್ಪ ಯಡಿಯಾಪುರ (32) ಎಂಬುವರು ಮಂಗಳವಾರ ಮೃತಪಟ್ಟಿದ್ದಾರೆ.

ಕುಕನೂರು ಸಮೀಪದ ಇಟಗಿ ಗ್ರಾಮದ ಬಳಿ ಜರುಗಿದ ಅಪಘಾತದಲ್ಲಿ ಅವರು ಮೃತ ಪಟ್ಡಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣದ ನಿಮಿತ್ತ ಬೆಳಗಿನ ಜಾವವೇ ಅವರು ಬೈಕ್ ಮೇಲೆ ಕಚೇರಿಗೆ ಹೊರಟಿದ್ದಾಗ ಎದುರಿನಿಂದ ಬಂದ ಹಾಲಿನ ವಾಹನ ಡಿಕ್ಕಿ ಹೊಡೆದಿದ್ದರಿಂದ ಈ ಘಟನೆ ನಡೆದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಕನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಥಮ ಚಿಕಿತ್ಸೆ ನೀಡಿ ಬಳಿಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೊನೆಯುಸಿರು ಎಳೆದಿದ್ದಾರೆ.

ಅಡಿವೆಪ್ಪ ಕೂಕನೂರು ತಾಲ್ಲೂಕಿನ ಬೆಣಕಲ್ ಗ್ರಾಮದವರಾಗಿದ್ದು, ಒಂದು ವರ್ಷದ ಹಿಂದೆಯಷ್ಟೇ ಮದುವೆಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT