ಮಂಗಳವಾರ, ಮೇ 17, 2022
25 °C

ಪಂಪಾ ವಿರೂಪಾಕ್ಷೇಶ್ವರಸ್ವಾಮಿ ಕಲ್ಯಾಣೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ನಗರದ ಹಿರೇಜಂತಕಲ್‌ನ ಪ್ರಸನ್ನ ಪಂಪಾ ವಿರೂಪಾಕ್ಷೇಶ್ವರ ಸ್ವಾಮಿಯ ಕಲ್ಯಾಣ ಮಹೋತ್ಸವ ಮಂಗಳವಾರ ಜರುಗಿತು.

ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ಪಂಪಾ ವಿರೂಪಾಕ್ಷನಿಗೆ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.

ನಂತರ ದೇವಸ್ಥಾನದ ಆವರಣದಲ್ಲಿ ಪಂಪಾ ವಿರೂಪಾಕೇಶ್ವರ ಸ್ವಾಮಿ ಮತ್ತು ಪಾರ್ವತಿ ದೇವಿಯ ಕಲ್ಯಾಣೋತ್ಸವ ಜರುಗಿತು. ತಹಶೀಲ್ದಾರ್‌ ಎಂ.ರೇಣುಕಾ ಅವರು ಕುಟುಂಬ ಸಮೇತರಾಗಿ ಪಾಲ್ಗೊಂಡಿದ್ದರು.

ನಗರಸಭೆ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಕಂದಾಯ ನಿರೀಕ್ಷಕ ಮಂಜುನಾಥ ಹಿರೇಮಠ, ಅರ್ಚಕರಾದ ರಾಯಸ್ಥ ರಂಗಾಚಾರ್ಯ, ಪವನ ಜೋಶಿ, ಅನಿಲ್, ಅನಂತ ಸಿದ್ದಾಂತಿ, ಪ್ರಮುಖರಾದ ನಾಗರಾಜ, ಸೋಮಪ್ಪ ಹಾಗೂ ಮುನಿಯಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.