ಮಂಗಳವಾರ, 5 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನುಮಸಾಗರ: ಕನಕದಾಸ ಜಯಂತಿ ಆಚರಣೆ

Last Updated 22 ನವೆಂಬರ್ 2021, 16:17 IST
ಅಕ್ಷರ ಗಾತ್ರ

ಹನುಮಸಾಗರ: ವಿವಿಧ ಶಾಲಾ–ಕಾಲೇಜು, ಸಂಘ ಸಂಸ್ಥೆಗಳಲ್ಲಿ ಸೋಮವಾರ ಕನಕದಾಸ ಜಯಂತಿ ಆಚರಿಸಲಾಯಿತು.

ಪೊಲೀಸ್ ಠಾಣೆಯಲ್ಲಿ ಸಬ್ ಇನ್‌ಸ್ಪೆಕ್ಟರ್‌ ಅಶೋಕ ಬೇವೂರು ಅವರು ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಎ.ಎಸ್.ಐ ರುದ್ರಯ್ಯ ಹಿರೇಮಠ, ಹೆಡ್‌ ಕಾನ್‌ಸ್ಟೆಬಲ್ ಮಹಾಂತೇಶ, ಕಾನ್‌ಸ್ಟೆಬಲ್‌ಗಳಾದ ಬಾಳನಗೌಡ ಪಾಟೀಲ, ಸಿದ್ದರಾಮಪ್ಪ, ಬಸವರಾಜ, ರವಿ ನಡುವಿನಮನಿ ಹಾಗೂ ಮಲ್ಲಪ್ಪ ಇದ್ದರು.

ಕರ್ನಾಟಕ ಪಬ್ಲಿಕ್ ಸ್ಕೂಲ್, ಸರ್ಕಾರಿ ಬಾಲಕರ ಪ್ರೌಢ ಶಾಲೆ, ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಯಂತಿ ಆಚರಿಸಲಾಯಿತು.

ಮುಖ್ಯಶಿಕ್ಷಕರಾದ ಎಂ.ಎಸ್.ಬಡದಾನಿ, ಹುಸೇನಸಾಬ ಇಲಕಲ್ಲ, ನಂದಲಾಲ ದಲಭಂಜನ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಶಂಕ್ರಮ್ಮ ನಿರ್ವಾಣ ಪೂಜೆ ಸಲ್ಲಿಸಿದರು.

ಉಪಾಧ್ಯಕ್ಷ ಮಂಜುನಾಥ ಹುಲ್ಲೂರ, ಪಿಡಿಒ ನಿಂಗಪ್ಪ ಮೂಲಿಮನಿ ಸೇರಿ ಗ್ರಾ.ಪಂ.ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT