ಕನಕಗಿರಿ: ‘ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷೆಯಲ್ಲಿ ಗಣತಿದಾರರು ಹಾಗೂ ಮೇಲ್ವಿಚಾರಕರಾಗಿ ಕರ್ತವ್ಯ ನಿಭಾಯಿಸಿದ ಶಿಕ್ಷಕರು ಹಾಗೂ ಇತರೆ ಇಲಾಖೆಯ ನೌಕರರಿಗೆ ಗಳಿಕೆ ರಜೆ ಹಾಗೂ ಸಂಭಾವನೆ ನೀಡಬೇಕು’ ಎಂದು ಇಲ್ಲಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕ ಅಧ್ಯಕ್ಷೆ ಶಂಶಾದಬೇಗ್ಂ ಆಗ್ರಹಿಸಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿ ಅವರು ಮಾತನಾಡಿದರು.

‘ಬೇಸಿಗೆ ರಜೆಯ ದಿನಗಳಲ್ಲಿ ಶಿಕ್ಷಕರು ಹಾಗೂ ನೌಕರರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ನೌಕರರಿಗೆ ಕೊಡಬೇಕಾದ ಸೌಲಭ್ಯಗಳನ್ನು ತ್ವರಿತ ಗತಿಯಲ್ಲಿ ನೀಡಬೇಲು’ ಎಂದು ಮನವಿ ಮಾಡಿದ ಅವರು, ‘ಸಂಘಗಳ ಕಚೇರಿ ನಿರ್ಮಾಣಕ್ಕೆ ನಿವೇಶನ ಕೊಡಿಸಿ’ ಎಂದೂ ಕೋರಿದರು.

ಸಚಿವ ಶಿವರಾಜ ತಂಗಡಗಿ ಮಾತನಾಡಿ, ‘ಸಮೀಕ್ಷೆ ಕೆಲಸದಲ್ಲಿ ಭಾಗವಹಿಸಿದ ಶಿಕ್ಷಕರು ಹಾಗೂ ನೌಕರರಿಗೆ ಸಿಗಬೇಕಾದ ಸರ್ಕಾರಿ ಸೌಲಭ್ಯ ಹಾಗೂ ನಿವೇಶನಗಳನ್ನು ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುವುದು’ ಎಂದರು.

ನೌಕರರ ಸಂಘದ ಕೋಶಾಧ್ಯಕ್ಷ ಗುರುಲಿಂಗಯ್ಯ ಪಂಜಿನಪೂಜಾರಿ, ನಿರ್ದೇಶಕರಾದ ಶೇಖರಯ್ಯ ಕಲ್ಮಠ, ಚಂದ್ರಕಲಾ ಚಿಂದಿ, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಮಾಡಳ್ಳಿ, ಎನ್ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಂಕರಗೌಡ ಪಾಟೀಲ, ಶಿಕ್ಷಕರಾದ ವಿರುಪಣ್ಣ, ದಾವಲಸಾಬ್, ಮಂಜುನಾಥ ಉದ್ದಿಹಾಳ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.