ಕನಕಗಿರಿ: ಕೇಂದ್ರ ಸರ್ಕಾರದ ಅನುಮೋದನೆ ಹಾಗೂ ಅನುದಾನವಿಲ್ಲದ 9 ಹೆಚ್ಚುವರಿ ಚಟುವಟಿಕೆಗಳ ಪ್ರೋತ್ಸಾಹ ಧನಕ್ಕೆ ಸಂಬಂಧಿಸಿದಂತೆ ಪ್ರಮುಖ ಮಾಡ್ಯೂಲ್ಗಳನ್ನು ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯಗೊಳಿಸಿರುವುದನ್ನು ವಿರೋಧಿಸಿ ಇಲ್ಲಿನ ಆಶಾ ಕಾರ್ಯಕರ್ತರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ಶರಣೆಗೌಡ ಅವರಿಗೆ ಮನವಿ ಸಲ್ಲಿಸಿದರು.

ಆಶಾ ಕಾರ್ಯಕರ್ತೆ ಮಲ್ಲಮ್ಮ ಗಡಾದ ಮಾತನಾಡಿ, ‘ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿದ್ದ ಕೆಲವು ಕಾರ್ಯಗಳ ಪ್ರೋತ್ಸಾಹಧನವನ್ನು ಪೂರ್ವ ಸೂಚನೆ ಇಲ್ಲದೆ ಸ್ಥಗಿತಗೊಳಿಸಲಾಗಿದೆ. ಮಹಿಳಾ ಮತ್ತು ಪುರುಷರ ಕುಟುಂಬ ಕಲ್ಯಾಣ ಶಸ್ತ್ರಚಿಕಿತ್ಸೆ, ಪ್ರಸವೋತ್ತರ ಶಸ್ತ್ರಚಿಕಿತ್ಸೆ ಸೇರಿದಂತೆ ಒಟ್ಟು 9 ಚಟುವಟಿಕೆಗಳಿಗೆ ಸಂಬಂಧಿಸಿದ ಮಾಡ್ಯೂಲ್ಗಳನ್ನು ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯಗೊಳಿಸಿದ್ದು, ಆಶಾ ಕಾರ್ಯಕರ್ತೆಯರಿಗೆ ಆರ್ಥಿಕವಾಗಿ ಸಮಸ್ಯೆ ಎದುರಾಗಿದೆ’ ಎಂದು ದೂರಿದರು.

‘ಕೇಂದ್ರ ಸರ್ಕಾರವು 9 ಚಟುವಟಿಕೆಗಳಿಗೆ ಅಗತ್ಯ ಅನುಮೋದನೆ ಹಾಗೂ ಅನುದಾನ ಒದಗಿಸಿ ಪ್ರೋತ್ಸಾಹಧನ ಪಾವತಿಸುವವರೆಗೆ ಸಂಬಂಧಿತ ಕೆಲಸಗಳನ್ನು ಮಾಡುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

‘ಸರ್ಕಾರ ಆಶಾ ಕಾರ್ಯಕರ್ತೆಯರ ಮೇಲೆ ಹೆಚ್ಚುವರಿ ಕೆಲಸಗಳ ಒತ್ತಡ ಹೇರದೆ, ಈಗಾಗಲೇ ಮಾಡುತ್ತಿರುವ ಕೆಲಸಗಳಿಗೆ ಸಮರ್ಪಕ ಪ್ರೋತ್ಸಾಹಧನ ಹಾಗೂ ಕಾರ್ಮಿಕ ಹಕ್ಕುಗಳನ್ನು ಖಾತ್ರಿಪಡಿಸಬೇಕು’ ಎಂದು ಆಗ್ರಹಿಸಿದರು.

ಆಶಾ ಮುಖಂಡರಾದ ಮಲ್ಲಮ್ಮ ಗಡಾದ, ಪೂರ್ಣಿಮಾ, ಶಿವಮ್ಮ, ಭಾನು, ಪುಷ್ಪಾವತಿ, ಮಹಾದೇವಿ, ಅನ್ನಪೂರ್ಣ , ವಿದ್ಯಾ ಸೇರಿದಂತೆ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-35-1059085151

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.