ಕನಕಗಿರಿ: ಕನಕಗಿರಿ-ತಾವರಗೇರಾ ರಸ್ತೆಯ ಎಂಆರ್ಪಿಎಲ್ ಪೆಟ್ರೋಲ್ ಬಂಕ್ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದ ಬೈಕ್ ಅಪಘಾತದಲ್ಲಿ ವೃದ್ಧರೊಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಜಕ್ಕಪ್ಪ ದಾಯಪುಲ್ಲೆ(75) ಮೃತರು.

ವಿರೂಪಾಪುರ ಗ್ರಾಮದಿಂದ ತಮ್ಮ ಮಗನ ದ್ವಿಚಕ್ರ ವಾಹನದಲ್ಲಿ ಕನಕಗಿರಿಗೆ ಬರುತ್ತಿದ್ದಾಗ ಹಿಂದಿನಿಂದ ಅತಿ ವೇಗವಾಗಿ ಬಂದ ಮತ್ತೊಂದು ದ್ವಿಚಕ್ರ ವಾಹನದ ಚಾಲಕ ಡಿಕ್ಕಿ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಜಕ್ಕಪ್ಪ ಅವರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿ ಹೊಡೆದ ಬೈಕ್ ಚಾಲಕ ಕನಕಾಪುರದ ಹನುಮಂತ ಮುರಡಿ ವಿರುದ್ಧ ಮೃತನ ಮಗ ಅಂಬಣ್ಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-35-1679551608

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.