ಕನಕಗಿರಿ: ‘ಸಂಘ ಪರಿವಾರವನ್ನು ಸಮಾಧಾನ ಪಡಿಸುವ ಉದ್ದೇಶದಿಂದ ರಾಜ್ಯದ ಕಾಂಗ್ರೆಸ್ ಸರ್ಕಾರ ಕೋಮುವಾದಿಗಳಾದ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ, ಆಂದೋಲ ಸ್ವಾಮಿ ಸೇರಿದಂತೆ ಕೋಮು ದ್ವೇಷ ಹರಡಿ, ಗಲಭೆ ಸೃಷ್ಟಿಸುವವರ ಕ್ರಿಮಿನಲ್ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವ ನಿರ್ಧಾರ ಮಾಡಿರುವುದು ರಾಜ್ಯದ ಜನತಂತ್ರ, ಕಾನೂನು ಸುವ್ಯವಸ್ಥೆಯ ಮೂಲ ತತ್ವಗಳ ಮೇಲಿನ ನೇರ ದಾಳಿಯಾಗಿದೆ’ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಅಜ್ಮೀರ್ ಸಿಂಗನಾಳ ದೂರಿದ್ದಾರೆ.

ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಪಕ್ಷದ ವತಿಯಿಂದ ಈಚೆಗೆ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ದ್ವೇಷ ಭಾಷಣಗಳ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಿದ್ದಾರೆ. ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜನೆ ಮಾಡಿದ್ದಾರೆ. ಅಲ್ಪಸಂಖ್ಯಾತರು ಹಾಗೂ ದಲಿತರ ವಿರುದ್ಧ ನಿರಂತರವಾಗಿ ವಿಷಕಾರಿ ಭಾಷಣ ಮಾಡಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಸರ್ಕಾರ ಹಿಂಪಡೆದಿರುವುದು ಕಾನೂನು ಸುವ್ಯವಸ್ಥೆಗೆ ಒಂದು ದೊಡ್ಡ ಸವಾಲಾಗಿದೆ’ ಎಂದು ಅಭಿಪ್ರಾಯಪಟ್ಟರು.

‘ಕಾನೂನು ಎಲ್ಲರಿಗೂ ಸಮಾನ ಎಂದು ನೆಪ್ಪವೊಡ್ಡಿ ಸಮಾಜ ಘಾತುಕ ಶಕ್ತಿಗಳನ್ನು ಪ್ರೋತ್ಸಾಹಿಸುವುದು ಅತ್ಯಂತ ಆಘಾತಕಾರಿ. ಎಂದು ಕೋಮು ಕ್ರಿಮಿಗಳಿಗೆ ವಿಶೇಷ ರಿಯಾಯಿತಿ ನೀಡುತ್ತಿರುವ ಸರ್ಕಾರದ ನಡೆ ಪ್ರಶ್ನಾರ್ಹವಾಗಿದೆ. ಕನ್ನಡ ಪರ ಹೋರಾಟಗಾರರ ಕೇಸುಗಳನ್ನು ಹಿಂಪಡೆದದ್ದು, ರೈತರ ಹೋರಾಟ, ರೈತ ಪರ ಹೋರಾಟಗಾರರ ಕೇಸುಗಳನ್ನು ಹಿಂದಕ್ಕೆ ಪಡೆದಿರುವುದು ಸ್ವಾಗತಿಸುತ್ತೇವೆ’ ಎಂದರು..

ಕೊಪ್ಪಳ ಜಿಲ್ಲಾ ಸಮಿತಿ ಸದಸ್ಯರಾದ ಅಬ್ದುಲ್ ಆಲಂ, ಕ್ಷೇತ್ರ ಸಮಿತಿ ಉಪಾಧ್ಯಕ್ಷ ದಾವೂದ್ ,ಕಾರ್ಯದರ್ಶಿ ಇಮ್ರಾನ್, ಕ್ಷೇತ್ರ ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-35-1017291526

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.