ಕನಕಗಿರಿ: ‘ಒಂದೇ ವಿಧಾನಸಭಾ ಕ್ಷೇತ್ರದಲ್ಲಿ ತಲಾ 2 ಪ್ರಜಾಸೌಧ ಹಾಗೂ 100 ಹಾಸಿಗೆ ಸೌಲಭ್ಯವಿರುವ ತಾಲ್ಲೂಕು ಆಸ್ಪತ್ರೆಗಳ ಕಟ್ಟಡ ನಿರ್ಮಿಸುತ್ತಿರುವುದು ಖುಷಿ ತಂದಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ತಿಳಿಸಿದರು.

ಇಲ್ಲಿನ ಸೋಮಸಾಗರ ಗ್ರಾಮದ ರಸ್ತೆಯಲ್ಲಿರುವ ಸುವರ್ಣಗಿರಿ ವಿರಕ್ತ ಮಠದ ಜಾಗದಲ್ಲಿ 100 ಹಾಸಿಗೆಗಳ ಆಸ್ಪತ್ರೆಯ ಕಟ್ಟಡಕ್ಕೆ ಭಾನುವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಆಸ್ಪತ್ರೆಗೆ ಒಟ್ಟು ₹42 ಕೋಟಿ ಮಂಜೂರಾಗಿದ್ದು, ಕಟ್ಟಡ ಹಾಗೂ ಮೂಲಸೌಕರ್ಯ ಒದಗಿಸಲಾಗುವುದು. ಹಿಂದೆ ತಮ್ಮ ಅವಧಿಯಲ್ಲಿ ಕಾರಟಗಿ ಹಾಗೂ ಕನಕಗಿರಿಯನ್ನು ತಾಲ್ಲೂಕು ಕೇಂದ್ರಗಳನ್ನಾಗಿ ಘೋಷಿಸಲಾಗಿತ್ತು. ಹಿಂದಿನ ಸರ್ಕಾರ ತಾಲ್ಲೂಕು ಕಚೇರಿ ಆರಂಭಿಸಲಿಲ್ಲ. ಈಗ ಎರಡು ತಾಲ್ಲೂಕಿನಲ್ಲಿ ಪ್ರಜಾಸೌಧ ಹಾಗೂ 100 ಹಾಸಿಗೆ ಸೌಲಭ್ಯದ ಆಸ್ಪತ್ರೆಗಳ ಕಾಮಗಾರಿ ಆರಂಭಗೊಂಡಿವೆ. ಜೂನ್ನಲ್ಲಿ ಪ್ರಜಾಸೌಧ ಕಟ್ಟಡ ಪೂರ್ಣಗೊಳ್ಳಲಿದೆ’ ಎಂದರು.

‘ದಾನಿಗಳು ಜಾಗ ನೀಡಿದರೆ ಮುಂದಿನ ದಿನಗಳಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಿಸಲಾಗುವುದು. ₹ 3 ಕೋಟಿ ಅನುದಾನ ನೀಡಲಾಗುವುದು ಹಾಗೂ ತಾಲ್ಲೂಕು ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೂ ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.

‘ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಆಸ್ಪತ್ರೆ ನಿರ್ಮಾಣಕ್ಕೆ ಮಠದ ಸ್ವಾಮಿಗಳು 6 ಎಕರೆ ಭೂಮಿ ದಾನವಾಗಿ ನೀಡಿದ ಪರಿಣಾಮ ಜನರ ಬೇಡಿಕೆ ಈಡೇರಿದಂತಾಗಿದೆ. ಈ ಆಸ್ಪತ್ರೆಯಿಂದ ಬಡಜನರಿಗೆ ಉತ್ತಮ ಚಿಕಿತ್ಸೆ ನೀಡಲು ಅನುಕೂಲವಾಗುವುದು. ಮಠಕ್ಕೆ ತಾವು ಚಿರ ಋಣಿಯಾಗಿರುವೆ’ ಎಂದು ಹೇಳಿದರು.

‘ಅಗ್ನಿ ಶಾಮಕದಳ ಕಚೇರಿ ನಿರ್ಮಾಣಕ್ಕೂ ₹3 ಕೋಟಿ ನೀಡಲಾಗಿದೆ. ಬಸ್ ಡಿಪೊ ಆರಂಭಿಸಲು ಈಗಾಗಲೇ ಜಾಗ ಗುರುತಿಸಲಾಗಿದೆ. ₹2 ಕೋಟಿ ಅನುದಾನದಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣ ಮಾಡಲಾಗಿದೆ. ಮೂಲಸೌಲಭ್ಯ ಕಲ್ಪಿಸಲು ಹೆಚ್ಚುವರಿಯಾಗಿ ₹1 ಕೋಟಿ ನೀಡಲಾಗಿದೆ. ಪಟ್ಟಣ ಪಂಚಾಯಿತಿ ನೂತನ ಕಟ್ಟಡಕ್ಕೆ ಜಾಗ ಗುರುತಿಸಲಾಗಿದ್ದು, ಅನುದಾಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದರು.

‘ಅಮೃತ ನಗರೋತ್ಥಾನ ಯೋಜನೆಯಲ್ಲಿ ಶುದ್ಧ ಕುಡಿಯುವ ನೀರಿನ ಯೋಜನೆಗೆ ₹2.2 ಕೋಟಿ ಅನುದಾನ ನೀಡಲಾಗಿದ್ದು ಕಾಮಗಾರಿ ನಡೆದಿದೆ. ತಾಲ್ಲೂಕುಗಳ ಅಭಿವೃದ್ಧಿಗಾಗಿ ರಚಿಸಿರುವ ಗೋವಿಂದರಾವ ಸಮಿತಿಯಲ್ಲಿ ಕನಕಗಿರಿ ಸೇರ್ಪಡೆಯಾಗಿದ್ದು, ಮುಂದಿನ ದಿನಗಳಲ್ಲಿ ಕೋಟಿಗಟ್ಟಲೆ ಅನುದಾನ ಹರಿದು ಬರಲಿದೆ’ ಎಂದರು.

ಇದೇ ಸಮಯದಲ್ಲಿ ₹2 ಕೋಟಿ ಮೊತ್ತದಲ್ಲಿ ಕನಕ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಸುವರ್ಣಗಿರಿ ಸಂಸ್ಥಾನ ವಿರಕ್ತಮಠದ ಚನ್ನಮಲ್ಲಸ್ವಾಮಿ ಮಾತನಾಡಿ, ‘ಸಚಿವ ತಂಗಡಗಿ ಅವರು ಶಿಕ್ಷಣ, ಆರೋಗ್ಯ ಸೇರಿದಂತೆ ಸಮಾಜಮುಖಿ ಕೆಲಸ ಮಾಡುತ್ತಿದ್ದಾರೆ. ನಾಯಕರು ತಮಗಾಗಿ ಅನುದಾನ ಕೇಳದೆ, ಊರಿನ ಪ್ರಗತಿಗೆ ಅನುದಾನ ನೀಡಿ ಎಂದು ಒತ್ತಾಯ ಮಾಡಬೇಕು ಎಂದು ಹೇಳಿದರು.

ಪಟ್ಟಣದ ಅಭಿವೃದ್ಧಿ ವಿಷಯ ಬಂದಾಗ ತಮ್ಮ ಮಠದ ಗೋಪುರ ಕೆಡವಲು ತಾವು ಬದ್ಧ. ಜನರು ತಮ್ಮ ಮನೆ ಮುಂದಿನ ಮನೆಯ ಕಟ್ಟೆ, ಗೋಡೆ, ಕಿತ್ತು ಸ್ಥಳೀಯ ಆಡಳಿತದೊಂದಿಗೆ ಕೈ ಜೋಡಿಸಬೇಕು ಎಂದರು.

ಪ.ಪಂ ಅಧ್ಯಕ್ಷೆ ತನುಶ್ರೀ ಟಿ.ಜೆ.ರಾಮಚಂದ್ರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರೆಡ್ಡಿಶ್ರೀನಿವಾಸ, ತಹಶೀಲ್ದಾರ್ ವಿಶ್ವನಾಥ ಮುರುಡಿ, ತಾ.ಪಂ ಪ್ರಭಾರ ಇಒ ರಾಜಶೇಖರ, ಪ.ಪಂ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ, ಉಪಾಧ್ಯಕ್ಷ ಕಂಠಿರಂಗ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲ್ಲಬಾಗಿಲಮಠ, ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ, ಕಾಂಗ್ರೆಸ್ ಉಪಾಧ್ಯಕ್ಷ ಸಿದ್ದಪ್ಪ ನೀರ್ಲೂಟಿ, ಜಿ.ಪಂ ಮಾಜಿ ಸದಸ್ಯರಾದ ವೀರೇಶ ಸಮಗಂಡಿ, ಅಮರೇಶ ಗೋನಾಳ, ತಾ.ಪಂ ಮಾಜಿ ಅಧ್ಯಕ್ಷ ಬಸಂತಗೌಡ ಪಾಟೀಲ, ಮಲ್ಲಿಕಾರ್ಜುನ ಪಾಟೀಲ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಗೌರಿಶಂಕರ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಪ್ರಕಾಶ ಹಾಜರಿದ್ದರು. ಅಮೀನಸಾಬ ನವಲಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-35-56972549

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.