ಕನಕಗಿರಿ: ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು ₹ 13.25 ಕೋಟಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಸಮೀಪದ ಬೆನಕನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

‘ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಡಾ. ಬಿ. ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದ ಕಟ್ಟಡ ನಿರ್ಮಾಣಕ್ಕೆ ₹ 5.56 ಕೋಟಿ, ಈಚನಾಳ ಗ್ರಾಮದಿಂದ ಸೋಮನಾಳ ಗ್ರಾಮದವರೆಗೆ ಸರಣಿ ಚೆಕ್ ಡ್ಯಾಂ ನಿರ್ಮಾಣಕ್ಕೆ ₹ 6.69 ಕೋಟಿ , ನವಲಿಯ ಜಡಿಸಿದ್ದೇಶ್ವರ ಸಮುದಾಯ ಭವನಕ್ಕೆ ₹ 1 ಕೋಟಿ, ಮೌನೇಶ್ವರ ಸಮುದಾಯ ಭವನಕ್ಕೆ ₹ 25 ಲಕ್ಷ, ಜೀರಾಳದ ಹೇಮರೆಡ್ಡಿ ಮಲ್ಲಮ್ಮ ಸಮುದಾಯ ಭವನಕ್ಕೆ ₹ 25 ಲಕ್ಷ, ಬೆನಕನಾಳ ಗ್ರಾಮದ ಗಂಗಾಪರಮೇಶ್ವರಿ ಸಮುದಾಯ ಭವನಕ್ಕೆ ₹ 20 ಲಕ್ಷ ಹಾಗೂ ಶರಣಬಸವೇಶ್ವರ ದೇವಸ್ಥಾನದ ಸಮುದಾಯ ಭವನಕ್ಕೆ ₹ 30 ಲಕ್ಷ ಅನುದಾನ ಬಿಡುಗಡೆಯಾಗಿದೆ’ ಎಂದರು.

‘ಮತ್ತೊಮ್ಮೆ ಬೆಂಬಲಿಸಿ’: ನಾಲ್ಕು ವಿಧಾನಸಭಾ ಚುನಾವಣೆಯಲ್ಲಿ ಆಶೀರ್ವಾದ ಮಾಡಿ 3 ಚುನಾವಣೆಯಲ್ಲಿ ಗೆಲ್ಲಿಸಿದ್ದೀರಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೂ ತಮಗೆ ಬೆಂಬಲ ನೀಡಬೇಕು ಎಂದು ತಂಗಡಗಿ ಮನವಿ ಮಾಡಿದರು. ನವಲಿ ಗ್ರಾಮದಲ್ಲೂ ಬೆಂಬಲ ಕೇಳಿದರು.

ಹೊಗಳಿದ ಬಿಜೆಪಿ ಮುಖಂಡರು: ಒಣಭೂಮಿ ಪ್ರದೇಶದ ಈ ಭಾಗದ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಸಚಿವ ತಂಗಡಗಿ ಅವರು ಭಗೀರಥರಾಗಿದ್ದಾರೆ ಎಂದು ಬಿಜೆಪಿ ಮುಖಂಡ ಶಿವಾನಂದ ವಂಕಲಕುಂಟಿ ಬೆನಕನಾಳ ಗ್ರಾಮದಲ್ಲಿ ಹೊಗಳಿದರು.

ಮಂಡಲ ಬಿಜೆಪಿಯ ನಿಕಟ ಪೂರ್ವ ಅಧ್ಯಕ್ಷ ಜಡಿಯಪ್ಪ ಮುಕ್ಕುಂದಿ ಮಾತನಾಡಿ, ‘ನವಲಿ ಭಾಗದ ಬಡ ಜನರಿಗೆ ಸಮುದಾಯ ಭವನದ ಅವಶ್ಯಕತೆ ಇತ್ತು. ಭವನ ನಿರ್ಮಾಣಕ್ಕೆ ₹ 1 ಕೋಟಿ ಅನುದಾನ ನೀಡಿದ್ದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ಸ್ವಾಮಿ ಕಲ್ಲಬಾಗಿಲಮಠ, ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ, ಬಿಸಿಎಂ ಇಲಾಖೆ ಅಧಿಕಾರಿ ನಾಗಮಣಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ವಿರುಪಣ್ಣ ಕಲ್ಲೂರು, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಸದಸ್ಯ ಮಲ್ಲಿಕಾರ್ಜುನ ಗೌಡ, ಗಡಿನಾಡು ಅಭಿವೃದ್ಧಿ ನಿಗಮದ ಸದಸ್ಯ ಶಿವರೆಡ್ಡಿ ಖ್ಯಾಡೆದ, ತಾ.ಪಂ ಮಾಜಿ ಅಧ್ಯಕ್ಷ ಬಸಂತಗೌಡ ಪಾಟೀಲ, ಪ್ರಮುಖರಾದ ವೀರೇಶ ಸಮಗಂಡಿ, ಸಿದ್ರಾಮಗೌಡ ಉಪ್ಪಳ, ತಾಪಂ ಪ್ರಭಾರ ಇಒ ರಾಜಶೇಖರ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-35-713183887

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.