ಕನಕಗಿರಿ: ‘ಬೇಸಿಗೆ ಹಿನ್ನೆಲೆಯಲ್ಲಿ ತಾಲ್ಲೂಕಿನ 11 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕು’ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ ಹೇಳಿದರು.

ಇಲ್ಲಿನ ತಾ.ಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಪಿಡಿಒ ಹಾಗೂ ಇತರೆ ಸಿಬ್ಬಂದಿ ಸಭೆಯಲ್ಲಿ ಅವರು ಮಾತನಾಡಿದರು.

‘ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮ ಪಂಚಾಯಿತಿಯವರು ಜಾಗ್ರತೆ ವಹಿಸಬೇಕು. ಜತೆಗೆ ವಾಟರ್ ಮ್ಯಾನ್ಗಳು ಯಾವ ಬೋರ್ವೆಲ್ಗಳಲ್ಲಿ ನೀರು ಕಡಿಮೆಯಾಗಿದೆ ಎಂಬುದರ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಬೇಕು’ ಎಂದರು.

‘ನೀರನ್ನು ವಿನಾಃ ಕಾರಣ ಪೋಲು ಮಾಡಬಾರದು. ಪ್ರತಿನಿತ್ಯ ಸಮಯ ನಿಗದಿಪಡಿಸಿ, ನೀರು ಪೂರೈಸಬೇಕು. ಜೊತೆಗೆ ಪೈಪ್ ಲೈನ್ ಎಲ್ಲಿ ಲೀಕ್ ಆಗುತ್ತಿದೆ ಎಂಬುದರ ಬಗ್ಗೆ ಮಾಹಿತಿ ಇರಬೇಕು’ ಎಂದು ತಿಳಿಸಿದರು.

ತಾ.ಪಂ ಇಒ ಕೆ.ರಾಜಶೇಖರ್ ಮಾತನಾಡಿ,‘ಪಿಡಿಒಗಳು ಹಾಗೂ ವಾಟರ್ ಮ್ಯಾನ್ಗಳು ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಬೇಕು. ನಿಮ್ಮ ಕೆಲಸವನ್ನು ಸರಿಯಾಗಿ ನಿರ್ವಹಿಸಿದರೆ, ಯಾವ ಗ್ರಾಮಗಳಲ್ಲಿಯೂ ಸಮಸ್ಯೆಗಳು ಉಲ್ಬಣವಾಗುವುದಿಲ್ಲ ಎಂಬುದು ಅರಿತುಕೊಳ್ಳಬೇಕು’ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-35-397029331

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.