ಕನಕಗಿರಿ: ‘ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ತಜ್ಞರಾಗಿ ಹಾಜರಾಗಿರುವ ಡಾ.ಈಶ್ಬರ ಸವಡಿ ಅವರನ್ನು ಬೇರೆಡೆಗೆ ನಿಯೋಜನೆ ಮಾಡಿ ತಾಲ್ಲೂಕಿನ ಜನರ ಆರೋಗ್ಯವನ್ನು ನಿರ್ಲಕ್ಷಿಸಲಾಗಿದೆ’ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಸಣ್ಣಕನಕಪ್ಪ ದೂರಿದ್ದಾರೆ.

ಬುಧವಾರ ಪತ್ರಕರ್ತರ ಜತೆಗೆ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಬಡವರು, ಕೂಲಿ ಕಾರ್ಮಿಕ ಕುಟುಂಬ ಹೆಚ್ಚಿದೆ. ರಾಜ್ಯದಲ್ಲಿ ಹೆಸರು ಮಾಡಿರುವ ಡಾ.ಸವಡಿ ಅವರು ಈಚೆಗೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಹಾಜರಾಗಿದ್ದು, ಸೇವೆ ಮಾತ್ರ ಬೇರೆ ತಾಲ್ಲೂಕಿಗೆ ನೀಡುತ್ತಿರುವುದರಿಂದ ಮಹಿಳೆಯರು, ಗರ್ಭಿಣಿಯರು ತಪಾಸಣೆ ಹಾಗೂ ಚಿಕಿತ್ಸೆಗಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.

‘ಡಾ.ಸವಡಿ ಅವರು ಇಲ್ಲಿ ಕರ್ತವ್ಯಕ್ಕೆ ಹಾಜರಾಗುವ ಮುಂಚೆ ಕೆಲ ಮಹಿಳಾ ವೈದ್ಯರು ಕೆಲಸ ಮಾಡುತ್ತಿದ್ದರು. ಸವಡಿ ಅವರು ಬಂದ ನಂತರ ಅವರನ್ನು ಬೇರೆಡೆಗೆ ನಿಯೋಜನೆ ಮಾಡಲಾಗಿದೆ. ಈಗ ಸವಡಿ ಅವರ ಸೇವೆ ಲಭ್ಯ ಇಲ್ಲದ ಪರಿಣಾಮ ರೋಗಿಗಳು ಪರದಾಡುತ್ತಿದ್ದಾರೆ’ ಎಂದರು.

‘ಇಲ್ಲಿನ ಪರಿಸ್ಥಿತಿ ಗಮನಕ್ಕೆ ಇದ್ದರೂ ಅಧಿಕಾರಿಗಳು ಬಡವರ ಆರೋಗ್ಯದ ಕಡೆಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಮೂರು ದಿನದೊಳಗೆ ಹೆರಿಗೆ ಹಾಗೂ ಪ್ರಸೂತಿ ತಜ್ಞರನ್ನು ನೇಮಿಸದಿದ್ದರೆ ಆಸ್ಪತ್ರೆ ಎದುರು ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-35-1932175009

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.