ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಗಿರಿ: ‘ರಾಷ್ಟ್ರ ನಾಯಕರ ಸೇವೆಯ ಸ್ಮರಣೆ ಅಗತ್ಯ’

Published 15 ಆಗಸ್ಟ್ 2023, 16:33 IST
Last Updated 15 ಆಗಸ್ಟ್ 2023, 16:33 IST
ಅಕ್ಷರ ಗಾತ್ರ

ಕನಕಗಿರಿ: ‘ದೇಶದ ಸ್ವಾತಂತ್ರ್ಯ ಚಳುವಳಿಗೆ ತಮ್ಮದೆಯಾದ ಕೊಡುಗೆ ನೀಡಿದ ರಾಷ್ಟ್ರ ನಾಯಕರ ತ್ಯಾಗ, ಬಲಿದಾನವನ್ನು ಯಾರೂ. ಮರೆಯಬಾರದು ಅವರನ್ನು ಸ್ಮರಿಸುವ ಕೆಲಸ ಮಾಡಬೇಕು’ ಎಂದು ತಹಶೀಲ್ದಾರ್ ವಿಶ್ವನಾಥ‌ ಮುರುಡಿ ತಿಳಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ‌ ಮೈದಾನದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಹಾಗೂ ಪಟ್ಟಣ ಪಂಚಾಯಿತಿವತಿಯಿಂದ ಮಂಗಳವಾರ ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ‌ ನೆರವೇರಿಸಿ ಅವರು ಮಾತನಾಡಿದರು.

ಪಿಐ ಜಗದೀಶ ಮಾತನಾಡಿ ‘ಸ್ವಾರ್ಥ ಭಾವನೆ ತೊರೆದು ನಾವೆಲ್ಲರೂ ಒಂದೇ ಎಂಬ ಭಾವನೆ ಬೆಳಸಿಕೊಳ್ಳಬೇಕು’ ಎಂದರು. 

ತಾ.ಪಂ‌ ಪ್ರಭಾರ ಇಒ ಚಂದ್ರಶೇಖರ ಕಂದಕೂರು ಮಾತನಾಡಿ‌ದರು.

ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿನಲ್ಲಿ ಹೆಚ್ಚು ಅಂಕ ಗಳಿಸಿದ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳಾದ ಜಿ.ರಕ್ಷಿತಾ, ಅಮೂಲ್ಯ ಹಾಗೂ ಪಿ.ಡಿ.ಶ್ರೇಯಾ ಅವರನ್ನು ಸನ್ಮಾನಿಸಲಾಯಿತು.

ಪೋಲಿಸ್ ಇಲಾಖೆಯಿಂದ ಧ್ವಜವಂದನೆ ಹಾಗೂ ವಿವಿಧ ಶಾಲಾ- ಕಾಲೇಜು ವಿದ್ಯಾರ್ಥಿಗಳಿಂದ‌ ಪಥ ಸಂಚಲನ‌ ನಡೆಯಿತು. ತಹಶೀಲ್ದಾರ್ ಮುರುಡಿ ಅವರು ತೆರೆದ ವಾಹನದಲ್ಲಿ ಸಂಚರಿಸಿ ಧ್ವಜವಂದನೆ ಸ್ವೀಕರಿಸಿದರು.

ಕಣ್ಮನ ಸೆಳೆದ ಸಾಂಸ್ಕೃತಿಕ ಕಾರ್ಯಕ್ರಮ: ಧ್ವಜಾರೋಹಣದ‌ ನಿಮಿತ್ತ ಆಯೋಜಿಸಿದ್ದ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಕಣ್ಮನ ಸೆಳೆದವು.

ಬಹುಮಾನ‌ ವಿಜೇತರು: ಸಾಂಸ್ಕೃತಿಕ ಕಾರ್ಯಕ್ರಮದ‌ ಪ್ರಾಥಮಿಕ ವಿಭಾಗದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದ್ಯಾಮವ್ವನಗುಡಿ(ಪ್ರಥಮ), ಸಾಯಿ ತೇಜ ಪಬ್ಲಿಕ್ ಶಾಲೆ(ದ್ವಿತೀಯ), ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಶ್ರೀ ವೆಂಕಟೇಶ್ವರ ಶಾಲೆ(ಪ್ರಥಮ), ಆದರ್ಶ ವಿದ್ಯಾಲಯ (ದ್ವಿತೀಯ) ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಮೌಲಾನ್ ಆಜಾದ ಆಂಗ್ಲ ಮಾಧ್ಯಮ ಶಾಲೆ( ಪ್ರಥಮ) ಹಾಗೂ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ‌ ಪಡೆದುಕೊಂಡರು.

ಧ್ವಜ ವಂದನೆ: ಧ್ವಜಾ ವಂದನೆ ಕಾರ್ಯಕ್ರಮದ ಪ್ರಾಥಮಿಕ ವಿಭಾಗದಲ್ಲಿ ಶ್ರೀ ಸಾಯಿ ಪಬ್ಲಿಕ್ ಶಾಲೆ(ಪ್ರಥಮ), ಕರ್ನಾಟಕ ಪಬ್ಲಿಕ್ ಶಾಲೆ (ದ್ವಿತೀಯ), ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಶ್ರೀ ಶಿವಯೋಗಿ ಚನ್ನಮಲ್ಲಸ್ವಾಮಿ ಹಿರಿಯ ಪ್ರಾಥಮಿಕ ಶಾಲೆ (ಪ್ರಥಮ), ಶ್ರೀ ವೆಂಕಟೇಶ್ವರ ಹಿರಿಯ ಪ್ರಾಥಮಿಕ ಶಾಲೆ (ದ್ವಿತೀಯ) ಹಾಗೂ ಪ್ರೌಢಶಾಲಾ ಮಟ್ಟದಲ್ಲಿ ಸರ್ಕಾರಿ ಪ್ರೌಢಶಾಲೆ(ಪ್ರಥಮ) ಮತ್ತು ರುದ್ರಸ್ವಾಮಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡರು.

ವಿಜೇತ ತಂಡಗಳಿಗೆ‌ ಬಹುಮಾನ ವಿತರಿಸಲಾಯಿತು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರೂಪಾಕ್ಷ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಪಿಎಸ್ ಐ ಕಾಶೀಂಸಾಬ,
ಗ್ರೇಡ್-2 ತಹಶೀಲ್ದಾರ್ ಮಹಾಂತಗೌಡ, ಪ್ರಭಾರ ಪ್ರಾಂಶುಪಾಲ ಎನ್.‌ಮಾರೆಪ್ಪ, ಉಪ ಪ್ರಾಂಶುಪಾಲ ಜಗದೀಶ ಹಾದಿಮನಿ, ಶಿಕ್ಷಣ ಸಂಯೋಜಕ ಆಂಜನೇಯ, ಸಿಆರ್ ಪಿ ಮಹೇಶ ಇದ್ದರು.

ದೈಹಿಕ ಶಿಕ್ಷಣ ಶಿಕ್ಷಕ ಶಂಕ್ರಪ್ಪ ಸೋಮನಕಟ್ಟಿ, ಗಾಯಕಿ ಗೀತಾ ಹಂಚಾಟೆ ಅವರನ್ನು ಈ ಸಮಯದಲ್ಲಿ ಸನ್ಮಾನಿಸಲಾಯಿತು.
ದೈಹಿಕ ಶಿಕ್ಷಣ ಶಿಕ್ಷಕ ಶಾಮೀದಸಾಬ ‌ಲೈನದಾರ, ಶಿಕ್ಷಕರಾದ ಪ್ರಭುಲಿಂಗ ವಸ್ತ್ರದ ಹಾಗೂ ಮೌನೇಶ್ವರ ಬಡಿಗೇತ ಕಾರ್ಯಕ್ರಮ ‌ನಿರ್ವಹಿಸಿದರು.

ಕನಕಗಿರಿ ಪಿಯು ಕಾಲೇಜಿನ ಮೈದಾನದಲ್ಲಿ ಮಂಗಳವಾರ ತಾಲ್ಲೂಕು ಆಡಳಿತ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮೌಲಾನ್ ಆಜಾದ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಪ್ರದರ್ಶಿಸಿದ ಸಾಮೂಹಿಕ ನೃತ್ಯ ಪ್ರಥಮ ಸ್ಥಾನ ಪಡೆಯಿತು
ಕನಕಗಿರಿ ಪಿಯು ಕಾಲೇಜಿನ ಮೈದಾನದಲ್ಲಿ ಮಂಗಳವಾರ ತಾಲ್ಲೂಕು ಆಡಳಿತ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮೌಲಾನ್ ಆಜಾದ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಪ್ರದರ್ಶಿಸಿದ ಸಾಮೂಹಿಕ ನೃತ್ಯ ಪ್ರಥಮ ಸ್ಥಾನ ಪಡೆಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT