ಕನಕಗಿರಿ: ‘ವಿಬಿ ಜಿ ರಾಮ್ ಜಿ ಯೋಜನೆ ರದ್ದುಗೊಳಿಸಿ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿ ಮಾಡಬೇಕು’ ಎಂದು ಕರ್ನಾಟಕ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಎಂ ಒತ್ತಾಯಿಸಿದರು.

ಇಲ್ಲಿನ ಸಿಐಟಿಯು ಕಚೇರಿಯಲ್ಲಿ ಕರ್ನಾಟಕ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ 2ನೇ ತಾಲ್ಲೂಕು ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ಕೃಷಿ ಕಾರ್ಮಿಕರಿಗೆ ಕನಿಷ್ಠ ವೇತನ ನೀಡಬೇಕು’ ಎಂದರು.

ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಉಪಾಧ್ಯಕ್ಷ ಗಂಗಾಧರಯ್ಯ ಸ್ವಾಮಿ ಮಾತನಾಡಿ, ‘ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೃಷಿ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದೆ. ಜನರ ತಲಾ ಆದಾಯ ಹೆಚ್ಚಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ’ ಎಂದು ದೂರಿದರು.

‘ಬಡವರಿಗೆ ಭೂಮಿ, ಮನೆ, ನಿವೇಶನ ನೀಡಬೇಕು. ಈ ಭಾಗದಲ್ಲಿ ಕೃಷ್ಣಾ ಬಿ ಸ್ಕೀಂ ಯೋಜನೆ ಜಾರಿಗೊಳಿಸಲು ಹೋರಾಟ ನಡೆಸಬೇಕಿದೆ’ ಎಂದರು.

ಸಮ್ಮೇಳನದ ನಿರ್ಣಯಗಳು: ವಿಬಿಜಿ ರಾಮ್ ಜಿ ಯೋಜನೆ ರದ್ದುಗೊಳಿಸಿ ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಕಾಯ್ದೆಯನ್ನು ಪುನರ್ ಸ್ಥಾಪಿಸಿ ಪ್ರತಿಯೊಬ್ಬ ಕೂಲಿಕಾರರಿಗೆ 200 ದಿನ ಕೆಲಸ, ದಿನಕ್ಕೆ ₹700 ಕೂಲಿ ನಿಗದಿ ಮಾಡಬೇಕು

ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಕಾಯಕ ಬಂಧುಗಳಿಗೆ ಪ್ರೋತ್ಸಾಹ ಧನ ವಿತರಿಸಬೇಕು

ಬಿಪಿಎಲ್ ಕಾರ್ಡ್ದಾರರಿಗೆ ತಿಂಗಳಿಗೆ 35 ಕೆಜಿ ಅಕ್ಕಿ ಹಾಗೂ ಅಗತ್ಯ 14ವಸ್ತುಗಳನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಬೇಕು

ಡಾ.ಸ್ವಾಮಿನಾಥನ್ ವರದಿ ಜಾರಿಗೊಳಿಸಿ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಮಾಡುವುದು ಸೇರಿದಂತೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಸಂಘದ ತಾಲ್ಲೂಕು ಅಧ್ಯಕ್ಷ ರಮೇಶ ಹಿರೇಡಂಕನಲ್ ಅಧ್ಯಕ್ಷತೆ ವಹಿಸಿದ್ದರು. ಸಿಐಟಿಯು ತಾಲ್ಲೂಕು ಸಮಿತಿ ಅಧ್ಯಕ್ಷ ಮಲ್ಲಪ್ಪ ಮ್ಯಾಗಡೆ, ಯಮನಪ್ಪ, ವಿರೂಪಣ್ಣ ಬಂಡಿ, ಹನುಮಸಿಂಗ್ ರಾಘವೇಂದ್ರ, ಬಾಳಪ್ಪ ಹುಲಿಹೈದರ, ಸಂಘಟನೆಯ ನಿಕಟ ಪೂರ್ವ ಅಧ್ಯಕ್ಷ ಹುಸೇನಪ್ಪ ಕೆ. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-35-1061994

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.