ಕನಕಗಿರಿ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪಿನ ಯುವಕರು ಹೊಡೆದಾಡಿಕೊಂಡ ಘಟನೆ ಸಮೀಪದ ನವಲಿ ಗ್ರಾಮದ ಬೋಗಾಪುರೇಶ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ನಡೆದಿದೆ. ರಥೋತ್ಸವ ನಡೆಯುವ ಮುಂಚೆ ಲಂಬಾಣಿ ಹಾಗೂ ಗಂಗಾಮತ ಸಮಾಜದ ಯುವಕರು ಪರಸ್ಪರ ಕೈಕೈ ಮಿಲಾಯಿಸಿದ್ದು, ಎರಡು ಗುಂಪಿನವರಿಗೂ ಗಾಯಗಳಾಗಿವೆ.

ಕೆಲ ಹೊತ್ತು ಜಾತ್ರೆಯ ಪರಿಸರದಲ್ಲಿ ಆತಂಕದ ವಾತಾವರಣ ತಲೆದೋರಿತ್ತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ ಎಂದು ಪ್ರತ್ಯಕ್ಷಿದರ್ಶಿಗಳು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಘಟನೆಯಲ್ಲಿ 10 ಜನರು ಸಿಕ್ಕಿದ್ದು, ಅವರನ್ನು ವಶಕ್ಕೆ ಪಡೆದುಕೊಂಡು ನೋಟಿಸ್ ನೀಡಲಾಗಿದೆ. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಐ ವಿ.ನಾರಾಯಣ ತಿಳಿಸಿದ್ದಾರೆ. ಬುಧವಾರ ರಾತ್ರಿವರೆಗೂ ಇಲ್ಲಿನ ಪೊಲೀಸ್ ಠಾಣೆಯ ಆವರಣದಲ್ಲಿ ಎರಡು ಕಡೆಯವರು ಜಮಾವಣೆಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-35-1172704456

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.