ಕನಕಗಿರಿ: ಇಲ್ಲಿನ ಸುವರ್ಣಗಿರಿ ಸಂಸ್ಥಾನ ವಿರಕ್ತಮಠದ ಆಶ್ರಯದಲ್ಲಿ ವಿಶ್ವಗುರು ಬಸವಣ್ಣನವರ 893ನೇಜಯಂತಿ ನಿಮಿತ್ತ ಸೋಮವಾರ ಸುವರ್ಣಗಿರಿ ವೈಭವ, ಸುವರ್ಣಗಿರಿ ಪ್ರಶಸ್ತಿ ಪ್ರದಾನ, ಇತರೆ ಕಾರ್ಯಕ್ರಮ ನಡೆಯಲಿವೆ.

ಮಹಾಂತ ಶಿವಾಚಾರ್ಯ ಅವರ ನೇತೃತ್ವದಲ್ಲಿ ಬೆಳಿಗ್ಗೆ 5 ಗಂಟೆಗೆ ವಿರಕ್ತಮಠದಲ್ಲಿ ಅಯ್ಯಚಾರ ಹಾಗೂ ಲಿಂಗದೀಕ್ಷೆ ಕಾರ್ಯಕ್ರಮ ಹಾಗೂ ಮಧ್ಯಾಹ್ನ 5 ಗಂಟೆಗೆ ಬಸವೇಶ್ವರರ ಮೂರ್ತಿಯ ಮೆರವಣಿಗೆಯು ಪಟ್ಟಣದ ರಾಜಬೀದಿ ಸೇರಿದಂತೆ ವಿವಿಧ ಬೀದಿಗಳಲ್ಲಿ ನಡೆಯಲಿದೆ. ನಗರಗಡ್ಡಿಯ ಶಾಂತಲಿಂಗೇಶ್ವರ ಸಂಸ್ಥಾನಮಠದ ಶಾಂತಲಿಂಗೇಶ್ವರಬಸ್ವಾಮೀಜಿ, ಸಂತೆಕೆಲ್ಲೂರಿನ ಮಹಂತಿನಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡುವರು.

ಸಂಜೆ 6.30ಕ್ಕೆ ಸುವರ್ಣಗಿರಿ ಪ್ರಶಸ್ತಿ, ಪರಿಪೂರ್ಣದೆಡೆಗೆ ಆಧ್ಯಾತ್ಮಿಕ ಪ್ರವಚನದ ಸಮಾರೋಪ ನಡೆಯಲಿದ್ದು ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಅವರಿಗೆ ಸುವರ್ಣಗಿರಿ ಪ್ರಶಸ್ತಿ ಪ್ರದಾನ ಮಾಡಲಾಗುವದು. ಈ ಸಮಯದಲ್ಲಿ ವಿವಿಧ ಮಠಾಧೀಶರು, ಅಧಿಕಾರಿಗಳು ಭಾಗವಹಿಸುವರು. ಮೈಸೂರು ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಪದವಿಯಲ್ಲಿ 13 ಚಿನ್ನದ ಪದಕ ಹಾಗೂ 4 ನಗದು ಬಹುಮಾನ ಪಡೆದ ತಾಲ್ಲೂಕಿನ ಕನ್ನೇರಮಡಗು ಗ್ರಾಮದ ವಿದ್ಯಾರ್ಥಿ ಚಂದ್ರಶೇಖರ ಕುಷ್ಟಗಿ ಹಾಗೂ ಆಯಾ ಗ್ರಾಮಗಳಲ್ಲಿ ಪ್ರವಚನ ಕಾರ್ಯಕ್ರಮ ನಡೆಸಿಕೊಟ್ಟ ಗ್ರಾಮಸ್ಥರಿಗೆ ಗುರುರಕ್ಷೆ ಹಾಗೂ ಕಾರಟಗಿಯ ಶರಣಬಸವೇಶ್ವರ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-35-1046831469

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.