ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯೋತ್ಸವ ಕೇವಲ ಉತ್ಸವವಾಗದೆ, ನಿತ್ಯೋತ್ಸವವಾಗಲಿ: ಬಿ.ಸಿ.ಪಾಟೀಲ್

Last Updated 1 ನವೆಂಬರ್ 2020, 7:47 IST
ಅಕ್ಷರ ಗಾತ್ರ

ಕೊಪ್ಪಳ: ರಾಜ್ಯೋತ್ಸವವು ಬರೀ ನವೆಂಬರ್ ಉತ್ಸವವಾಗದೆ ನಿತ್ಯೋತ್ಸವವಾಗಬೇಕು ಎಂದು ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟç ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕನ್ನಡಿಗರು ಅನ್ಯ ರಾಜ್ಯದವರೊಂದಿಗೆ ಅವರದೇ ಭಾಷೆಯಲ್ಲಿ ವ್ಯವಹರಿಸುತ್ತಾರೆ. ಇದರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಅನ್ಯ ಭಾಷೆಗಳದ್ದೇ ಪ್ರಭಾವ ಹೆಚ್ಚಾಗಿದೆ. ಆದ್ದರಿಂದ ಕನ್ನಡಿಗರು ಕನ್ನಡ ಭಾಷೆಯನ್ನು ನಿತ್ಯ ಬಳಸಬೇಕು. ಬೇರೆ ರಾಜ್ಯದವರೊಂದಿಗೆ ಕನ್ನಡ ಭಾಷೆಯಲ್ಲಿಯೇ ವ್ಯವಹರಿಸಬೇಕು. ಭಾಷೆಯ ಬಳಕೆಯಿಂದ ಮಾತ್ರ ಭಾಷೆಯನ್ನು ಉಳಿಸಲು, ಬೆಳೆಸಲು ಸಾಧ್ಯ. ಆದ್ದರಿಂದ ಕನ್ನಡಿಗರು ಕೇವಲ ನವೆಂಬರ್‌ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸದೆ ಪ್ರತಿದಿನ ಕನ್ನಡ ಬಳಕೆಯನ್ನು ಮಾಡುವುದರ ಮೂಲಕ ನಿತ್ಯೋತ್ಸವವನ್ನಾಗಿ ಆಚರಿಸಬೇಕು ಎಂದರು.
ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿವೆ. ಕನ್ನಡಿಗರು ವಿಶಾಲ ಮನೋಭಾವದಿಂದ ಎಲ್ಲಾ ಭಾಷಿಗರನ್ನು ಸ್ವಾಗತಿಸಿ, ಸ್ವೀಕರಿಸುತ್ತಾರೆ. ಇಲ್ಲಿ ಭಾಷೆಯ ಕುರಿತು ಸ್ವಾಭಿಮಾನದ ಕೊರತೆ ಇದೆ. ಬೇರೆ ಭಾಷೆಗಳನ್ನು ಬಳಸುವಲ್ಲಿ ತೋರುವ ಉತ್ಸಾಹವನ್ನು ನಮ್ಮದೇ ಭಾಷೆಯನ್ನು ಬಳಸಲು ತೋರಬೇಕು. ನಿರಭಿಮಾನಿಗಳಾಗದೆ ಸ್ವಾಭಿಮಾನಿಗಳಾಗಬೇಕು. ಕನ್ನಡ ನಾಡು, ನುಡಿ, ನೆಲ, ಜಲಕ್ಕೆ ಧಕ್ಕೆಯಾದಾಗ ನಾವೆಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಅವರು ಹೇಳಿದರು.

ಆಲೂರು ವೆಂಕಟರಾಯರು 1901 ರಲ್ಲಿಯೇ ಏಕೀಕರಣದ ಹೋರಾಟವನ್ನು ಆರಂಭಗೊಳಿಸಿದ್ದರು. ರಾಜ್ಯದ ಸರ್ವಾಂಗೀಣ ಪ್ರಗತಿಗೆ ಭದ್ರ ಬುನಾದಿ ಹಾಕಿದ ಹಿಂದುಳಿದ ಜನ, ವರ್ಗದ ಅಭ್ಯುದಯದ ಹರಿಕಾರ ಡಿ. ದೇವರಾಜ ಅರಸು ರವರು 1973ರ ನವೆಂಬರ್. 1 ರಂದು ಗಟ್ಟಿ ನಿರ್ಧಾರ ತಳೆದು ಮೈಸೂರು ರಾಜ್ಯವನ್ನು “ಕರ್ನಾಟಕ” ಎಂದು ಮರು ನಾಮಕರಣ ಮಾಡಿದರು. ಕಿನ್ನಾಳ ಕರಕುಶಲ ಕಲೆ, ಜಾನಪದ ಪ್ರದರ್ಶನ ಕಲೆಗಳು, ಶಿಲ್ಪಕಲೆಗಳಿಗೆ ಸಂಬAಧಿಸಿದ ಕಲಾಪ್ರಕಾರಗಳು ಕೊಪ್ಪಳ ಜಿಲ್ಲೆಯಲ್ಲಿ ಇರುವುದು ಅಭಿಮಾನದ ಸಂಗತಿಯಾಗಿರುವುದರ ಜೊತೆಗೆ ಈ ಕನ್ನಡ ರಾಜ್ಯೋತ್ಸವ ಸುಸಂದರ್ಭದಲ್ಲಿ ಜಾನಪದ/ ತೊಗಲು ಗೊಂಬೆ ಆಟದಲ್ಲಿ ಕೊಪ್ಪಳ ಜಿಲ್ಲೆಯ ಕೇಶಪ್ಪ ಶಿಳ್ಳೆಕ್ಯಾತರ್ ಇವರಿಗೆ 2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಸಂದಿರುವುದು ಈ ಜಿಲ್ಲೆಯ ಹೆಮ್ಮೆಯಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭ ಕೃಷಿ ಇಲಾಖೆಯ ಹಿಂಗಾರು ಬೆಳೆ ವಿಮೆ ಕುರಿತಾದ ಕರಪತ್ರವನ್ನು ಸಚಿವರು ಬಿಡುಗಡೆಗೊಳಿಸಿದರು. ನಂತರ ನಗರಸಭೆಯಿಂದ ಭುವನೇಶ್ವರಿ ಭಾವಚಿತ್ರ, ಆರೋಗ್ಯ ಇಲಾಖೆಯಿಂದ ಕರೋನಾ ಜಾಗೃತಿ, ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಡಿಜಿಟಲ್ ಅಂಗನವಾಡಿ, ಸ್ನೇಹ ತಂತ್ರಜ್ಞಾನ ಮತ್ತು ಸ್ಮಾರ್ಟ್ ಫೋನ್ ವಿತರಣೆ, ಕೃಷಿ ಇಲಾಖೆಯಿಂದ ಸಿರಿಧಾನ್ಯಗಳ ಮಹತ್ವ, ಸಾರಿಗೆ ಇಲಾಖೆಯಿಂದ ಕರೋನಾ ಜಾಗೃತಿ ಕುರಿತು ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಯಿತು. ಸಾರಿಗೆ ಇಲಾಖೆಯ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ, ಆರೋಗ್ಯ ಇಲಾಖೆಯ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಮತ್ತು ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಸ್ತಬ್ಧಚಿತ್ರಗಳಿಗೆ ತೃತೀಯ ಬಹುಮಾನ ನೀಡಲಾಯಿತು.

ಇದಕ್ಕೂ ಮೊದಲು ಪೊಲೀಸ್ ಇಲಾಖೆ, ಸಶಸ್ತ್ರಮೀಸಲುದಳ, ಅರಣ್ಯ ಇಲಾಖೆ, ಗೃಹ ರಕ್ಷಕದಳ, ಭಾರತ ಸೇವಾದಳ, ಎನ್.ಸಿ.ಸಿ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ತಂಡಗಳಿಂದ ಪಥಸಂಚಲನ ನಡೆಸಿ, ಸಚಿವರಿಗೆ ಗೌರವ ವಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಚಾರ್ಯರಾದ ಸಿ.ವಿ.ಜಡಿಯವರ ನಿರೂಪಿಸಿದರು. ಸಂಗೀತ ಶಿಕ್ಷಕರಾದ ಸದಾಶಿವ ಪಾಟೀಲ್ ಅವರ ತಂಡ ನಾಡಗೀತೆ ಹಾಗೂ ರೈತಗೀತೆಯನ್ನು ಪ್ರಸ್ತುತ ಪಡಿಸಿದರು. ವಿವಿಧ ಶಾಲಾ ಮಕ್ಕಳು ಸಂಗೀತ ಕಾರ್ಯಕ್ರಮ ಪ್ರಸ್ತುತ ಪಡಿಸಿದರು.

ಕಾರ್ಯಕ್ರಮದಲ್ಲಿ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ರಾಜಶೇಖರ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಜಿ.ಪಂ. ಉಪಾಧ್ಯಕ್ಷೆ ಬೀನಾ ಗೌಸ್, ತಾ.ಪಂ. ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿ.ಪಂ.ಸಿ.ಇ.ಒ ರಘುನಂದನ್ ಮೂರ್ತಿ, ಪೊಲೀಸ್ ಅಧೀಕ್ಷಕ ಟಿ.ಶ್ರೀಧರ, ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ತಹಶೀಲ್ದಾರ ಜೆ.ಬಿ.ಮಜ್ಗಿ, ಸಹಾಯಕ ಆಯುಕ್ತರಾದ ನಾರಾಯಣ ಕನಕರಡ್ಡಿ ಸೇರಿದಂತೆ ಜಿಲ್ಲಾ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಮೆರವಣಿಗೆ: ರಾಜ್ಯೋತ್ಸವದ ಅಂಗವಾಗಿ ಬೆಳಿಗ್ಗೆ ನಗರದ ತಹಶೀಲ್ದಾರ ಕಚೇರಿಯಲ್ಲಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.

ಈ ಸಂದರ್ಭ ಜಿ.ಪಂ.ಸಿ.ಇ.ಒ ರಘುನಂದನ್ ಮೂರ್ತಿ, ಪೊಲೀಸ್ ಅಧೀಕ್ಷಕ ಟಿ.ಶ್ರೀಧರ, ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ, ತಹಶೀಲ್ದಾರ ಜೆ.ಬಿ.ಮಜ್ಗಿ, ನಗರಸಭೆ ಪೌರಾಯುಕ್ತ ಮಂಜುನಾಥ, ಜಂಟಿ ಕೈಗಾರಿಕಾ ನಿರ್ದೇಶಕ ಪ್ರಶಾಂತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟ, ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT