ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪರಿಕರಕ್ಕೆ ಆಗ್ರಹ: ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ

ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪರಿಕರ ನೀಡಲು ಆಗ್ರಹ
Published 6 ನವೆಂಬರ್ 2023, 7:53 IST
Last Updated 6 ನವೆಂಬರ್ 2023, 7:53 IST
ಅಕ್ಷರ ಗಾತ್ರ

ಕೊಪ್ಪಳ: ರೈತರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೇರಿ ಇತರ ಸೌಲಭ್ಯಗಳನ್ನು ಹಿಂಪಡೆದ ರಾಜ್ಯ ಸರ್ಕಾರ ಅವುಗಳನ್ನು ವಾಪಸ್ ಕೊಡಬೇಕು. ಈ ಕುರಿತು ಮರು ಆದೇಶ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ಸಂಸದ ಸಂಗಣ್ಣ ಕರಡಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ಸೋಮವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು ಬರಗಾಲದ ಸಂಕಷ್ಟದ ಸಮಯದಲ್ಲಿಯೂ ರಾಜ್ಯ ಸರ್ಕಾರ ರೈತರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ. ಇಂಧನ ಸಚಿವ ಕೆ.ಜಿ. ಜಾರ್ಜ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊದಲು ಐಪಿ ಸೆಟ್ ಗಳನ್ನು ಅಕ್ರಮ, ಸಕ್ರಮದಡಿ ಸೌಲಭ್ಯ ನೀಡಲಾಗುತ್ತಿತ್ತು. ಸೌರ ವಿದ್ಯುತ್ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯೋಜನೆ ಕಳೆದ ತಿಂಗಳು ರದ್ದುಪಡಿಸಲಾಗಿದೆ. ಇದರಿಂದ ರೈತರಿಗೆ ಸಾಕಷ್ಟು ತೊಂದರೆಯಾಗಿದೆ. ಹಿಂದಿನ ಆದೇಶವನ್ನು ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಖಿಕವಾಗಿ ಹೇಳಿದ್ದಾರೆ. ಆದರೆ ಮರು ಆದೇಶ ಹೊರಡಿಸಿಲ್ಲ. ಮರು ಅದೇಶವಾಗುವ ತನಕ ಉಪವಾಸ ಸತ್ಯಾಗ್ರಹ ನಿರಂತರ ಎಂದರು.

ಸರ್ಕಾರ ನಿರಂತರ ಲೋಡ್ ಶೆಡ್ಡಿಂಗ್ ಮಾಡುತ್ತಿರುವ ಕಾರಣ ರೈತರು ಇರುವ ಬೆಳೆ ಉಳಿಸಿಕೊಳ್ಳಲು ಪರದಾಡುವ ಪರಿಸ್ಥಿತಿ ಎದುರಾಗಿದೆ.ಮೊದಲೇ ರಾಜ್ಯದಲ್ಲಿ ಬರ ಇದೆ ಎಂದರು.

ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಹಾಗೂ ಬಿಜೆಪಿ ನಾಯಕರು ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT