ಕಾರಟಗಿ: ತಾಲ್ಲೂಕಿನ ಮರ್ಲಾನಹಳ್ಳಿ ಗ್ರಾಮದ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಸೇವಾ ಟ್ರಸ್ಟ್ ಆಶ್ರಯದಲ್ಲಿ 40ನೇ ವರ್ಷದ ಮೂರ್ತಿ ಪ್ರತಿಷ್ಠಾಪನೆ, ವಾರ್ಷಿಕೋತ್ಸವ ಹಾಗೂ ಶ್ರೀನಿವಾಸ ಕಲ್ಯಾಣ ಮಹೋತ್ಸವವು ಸಡಗರ, ಸಂಭ್ರಮದೊಂದಿಗೆ ವಿಜೃಂಭಣೆಯಿಂದ ಸೋಮವಾರ ನಡೆಯಿತು.

ಬೆಳಿಗ್ಗೆ ಸುಪ್ರಭಾತ ಸೇವೆ, ಅಭಿಷೇಕ ಹಾಗೂ ವಿಶೇಷ ಪೂಜೆ ಹಾಗೂ ವಿಶೇಷ ಅಲಂಕಾರ ಪೂಜೆಯೊಂದಿಗೆ ಶ್ರೀನಿವಾಸ ಕಲ್ಯಾಣ ಮಹೋತ್ಸವವನ್ನು ವೈದಿಕ ಸಂಪ್ರದಾಯದಂತೆ ಭಕ್ತಿ, ಭಾವದಿಂದ ನಡೆಸಲಾಯಿತು.

ಅರ್ಚಕ ಪ್ರಸಾದ ಮಾತನಾಡಿ, ‘ಎಂ.ಅಪ್ಪಾರಾವ ಶೆಟ್ಟಿ ಈ ಭಾಗದ ಜನರಿಗೆ ವೆಂಕಟೇಶ್ವರ ಸ್ವಾಮಿಯ ಭಕ್ತಿ, ದರ್ಶನ ಮತ್ತು ಆರಾಧನೆ ಸಲೀಸಾಗಿ ದೊರೆಯಲು 40 ವರ್ಷದ ಹಿಂದೆ ಆರಂಭಿಸಿದ ಧಾರ್ಮಿಕ ಕಾರ್ಯಕ್ರಮವನ್ನು ಅವರ ಕುಟುಂಬ ವರ್ಗದವರು ಮುನ್ನೆಡಿಸಿಕೊಂಡು ಹೊರಟಿರುವುದು ಮಹಾ ಮಹಾತ್ಕಾರ್ಯ’ ಎಂದು ಹೇಳಿದರು.

ಮಧ್ಯಾಹ್ನ ಆಗಮಿಸಿದ್ದ ಸಹಸ್ರಾರು ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಹೋಮ-ಹವನ, ಭಜನೆ, ಕೋಲಾಟ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಗ್ರಾಮಸ್ಥರು, ವಿವಿಧೆಡೆಯ ಭಕ್ತರು ಹಾಗೂ ಎಂ.ಅಪ್ಪಾರಾವ ಕುಟುಂಬದವರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು. ಭಕ್ತಿ, ಸಾಮಾಜಿಕ ಸೌಹಾರ್ದತೆಯ ಪ್ರತೀಕವಾಗಿ ಕಲ್ಯಾಣ ಮಹೋತ್ಸವ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-35-997712849

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.