ಕಾರಟಗಿ: ‘ಮೇ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಬಹುದು. ತಾಲ್ಲೂಕು ವ್ಯಾಪ್ತಿಯ 13 ಗ್ರಾ.ಪಂಗಳಲ್ಲಿ ಪ್ರತಿ ಮಂಗಳವಾರ ಅಭಿವೃದ್ಧಿ ಅಧಿಕಾರಿ, ಗ್ರಾಮ ಆಡಳಿತಾಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಬೇಕು. ತಾಲ್ಲೂಕು ಆಡಳಿತಕ್ಕೆ ವರದಿ ಸಲ್ಲಿಸಬೇಕು. ಅಗತ್ಯವಿರುವೆಡೆ ಖಾಸಗಿ ಕೊಳವೆಬಾವಿಗಳನ್ನು ಈಗಲೇ ಗುರುತಿಸಿ ಕಾಯ್ದಿರಿಸಿಕೊಳ್ಳಬೇಕು. ನೀರಿನ ಮೂಲಗಳ ಸ್ವಚ್ಛತೆ, ನಿರ್ವಹಣೆಗೆ ಆದ್ಯತೆ ನೀಡಬೇಕು’ ಎಂದು ಉಪವಿಭಾಗಾಧಿಕಾರಿಯೂ ಆದ ಕನಕಗಿರಿ ವಿಧಾನಸಭಾ ಕ್ಷೇತ್ರದ ನೋಡಲ್ ಅಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೂಚಿಸಿದರು.

ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ಅಧಿಕಾರಿಗಳ, ಅಭಿವೃದ್ಧಿ ಅಧಿಕಾರಿಗಳ, ಗ್ರಾಮ ಆಡಳಿತಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಬಿಸಿಲಿನ ತಾಪಮಾನ ಏರುಗತಿಯಲ್ಲಿದ್ದು, ಅಂತರ್ಜಲದ ಮಟ್ಟವೂ ಕ್ಷೀಣಿಸುತ್ತಿದೆ. ಪಟ್ಟಣ ಸಹಿತ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಈಗಿನಿಂದಲೇ ಅಗತ್ಯ ಮುಂಜಾಗ್ರತೆ ಕ್ರಮಕೈಗೊಳ್ಳಬೇಕು. ಪ್ರತಿ ಗ್ರಾಮದ ನೀರಿನ ಸಂಗ್ರಹಣೆ ಸ್ಥಳ, ಪೈಪ್ಲೈನ್, ನೀರಿನ ತೊಟ್ಟಿಗಳನ್ನು ತಪಾಸಣೆ ಮಾಡಿ, ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಒಟ್ಟಾರೆ ನೀರಿನ ಅಭಾವ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಸಿದ್ಧರಿರಬೇಕು. ಸಾರ್ವಜನಿಕರಿಂದ ಕುಡಿಯುವ ನೀರಿನ ವಿಷಯಕ್ಕೆ ಸಂಬಂಧಿಸಿದ ದೂರುಗಳಿಗೆ ತಕ್ಷಣವೇ ಸ್ಪಂದಿಸಿ, ಪರಿಹಾರ ದೊರಕಿಸಬೇಕು’ ಎಂದು ಹೇಳಿದರು.

ಜಾನುವಾರಿಗೆ ನೀರು, ಮೇವು ಕೊರತೆ ಆಗದಂತೆ ತಾಲ್ಲೂಕು ಆಡಳಿತ ಕ್ರಮ ವಹಿಸಬೇಕು. ಜಾನುವಾರಿಗೆ ನಿರ್ಮಿಸಿರುವ ನೀರಿ ತೊಟ್ಟಿಯನ್ನು ಸ್ವಚ್ಛಗೊಳಿಸಿ, ಸದಾ ನೀರು ಸಂಗ್ರಹಣೆ ಇರುವಂತೆ ನೋಡಿಕೊಳ್ಳಬೇಕು. ಅಗತ್ಯವಿರುವೆಡೆ ನೀರಿನ ತೊಟ್ಟಿಗಳನ್ನು ನಿರ್ಮಿಸಬೇಕು’ ಎಂದು ಸೂಚಿಸಿದರು.

ತಹಶೀಲ್ದಾರ್ ಎಂ.ಕುಮಾರಸ್ವಾಮಿ ಮಾತನಾಡಿ, ‘ನೀರಿನ ಸಮಸ್ಯೆಗೆ ಸ್ಪಂದಿಸಲು ವಿವಿಧ ಕಚೇರಿಗಳಲ್ಲಿ ಕುಡಿಯುವ ನೀರಿನ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ತಹಶೀಲ್ದಾರ್ ಕಚೇರಿಯ ನಂ. 87924 29600, ತಾ.ಪಂ ಕಚೇರಿ ನಂ. 9845213245, 6362150339 ಹಾಗೂ ಪುರಸಭೆಯ ನಂ. 9900972859 ಹಾಗೂ 9449963320. ನೀರಿಗೆ ಸಂಬಂಧಿಸಿದ ದೂರುಗಳಿಗೆ ಸಾರ್ವಜನಿಕರು ಸಂಪರ್ಕಿಸಿ, ಪರಿಹಾರ ಕಂಡುಕೊಳ್ಳಬಹುದು’ ಎಂದು ಹೇಳಿದರು.

ತಾ.ಪಂ ಇಒ ಲಕ್ಷ್ಮೀದೇವಿ, ಗ್ರಾಮೀಣ ಕುಡಿಯುವ ಮತ್ತು ನೈರ್ಮಲ್ಯ ಇಲಾಖೆ ಎಂಜಿನೀಯರ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-35-825864194

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.