ಕಾರಟಗಿ: ‘ತಾಲ್ಲೂಕಿನ ಸರ್ಕಾರಿ ನೌಕರರು ಸರ್ಕಾರ ಹಾಗೂ ಜನರ ಮಧ್ಯೆ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನೌಕರರ ಸಂಘದ ಇತರೆ ಕಾರ್ಯಚಟುವಟಿಕೆಗಳನ್ನು ನಡೆಸಲು ಅನುಕೂಲವಾಗುವಂತೆ ಸಾಂಸ್ಕೃತಿಕ ಭವನ ನಿರ್ಮಿಸಲು ಉದ್ದೇಶಿಸಿದೆ. ಭವನ ನಿರ್ಮಾಣಕ್ಕೆ ಸರ್ಕಾರದ ಜಾಗ ನೀಡಬೇಕು’ ಎಂದು ಆಗ್ರಹಿಸಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸದಸ್ಯರು ಗ್ರೇಡ್-2 ತಹಶೀಲ್ದಾರ್ ಷಣ್ಮುಖಪ್ಪಗೆ ಶುಕ್ರವಾರ ಮನವಿ ಸಲ್ಲಿಸಿದರು.

ಸಂಘದ ತಾಲ್ಲೂಕು ಅಧ್ಯಕ್ಷ ಹನುಮಂತಪ್ಪ ತೊಂಡಿಹಾಳ ಮಾತನಾಡಿ, ‘ಸರ್ಕಾರಿ ನೌಕರರು ದಿನನಿತ್ಯ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಜೊತೆಗೆ ಸಾರ್ವಜನಿಕ ಸಮಸ್ಯೆಗಳ ನಿವಾರಣೆಗೆ ಶ್ರಮಿಸುತ್ತಿದ್ದಾರೆ. ಜನರ ಸಮಸ್ಯೆಗಳನ್ನು ಆಡಳಿತ ಯಂತ್ರದ ಗಮನಕ್ಕೆ ತಂದು ಸುಧಾರಣೆಗೆ ಶ್ರಮಿಸುತ್ತಿದ್ದಾರೆ. ಸರ್ಕಾರದ ಯೋಜನೆಗಳು ಯಶಸ್ವಿಯಾಗಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಮುಖ್ಯವಾಗಿದೆ. ತಾಲ್ಲೂಕು ಕೇಂದ್ರದಲ್ಲಿಯೂ ಸರ್ಕಾರಿ ನೌಕರರ ಹಿತಾಸಕ್ತಿ ಕಾಪಾಡಲು ಹಾಗೂ ಇತರ ಕಾರ್ಯಚಟುವಟಿಕೆಗಳನ್ನು ನಡೆಸಲು ಭವನ ನಿರ್ಮಿಸಲು ತಾಲ್ಲೂಕಾಡಳಿತ ಈಗಾಗಲೇ ಗುರುತಿಸಿರುವ ಸ.ನಂ. 265ರ 12.15 ಎಕರೆಯ ಸರ್ಕಾರಿ ಭೂಮಿಯಲ್ಲಿ 20 ಗುಂಟೆ ಜಾಗೆಯನ್ನು ಸಂಘಕ್ಕೆ ಮಂಜೂರು ಮಾಡಬೇಕು’ ಎಂದು ಆಗ್ರಹಿಸಿದರು.

ಸಂಘದ ಉಪಾಧ್ಯಕ್ಷ ಗುರುಪ್ರಸಾದ, ಕಾರ್ಯದರ್ಶಿ ವೆಂಕೋಬ ಛಲವಾದಿ, ರಾಜ್ಯ ಪರಿಷತ್ ಸದಸ್ಯ ಮಂಜುನಾಥ ಹಿರೇಮಠ, ಖಜಾಂಚಿ ಶ್ರೀಕಾಂತ, ಸಾಂಸ್ಕೃತಿಕ ಕಾರ್ಯದರ್ಶಿ ಶಿವರಾಜಕುಮಾರ, ಪಿಡಿಒ ಸಂಘದ ಅಧ್ಯಕ್ಷ ವೆಂಕಟೇಶ ಸಂಕನಾಳ, ಶಿರಸ್ತೇದಾರ ಜಗದೀಶ, ಸಾವಿತ್ರಿಬಾಯಿ, ಕಂದಾಯ ನಿರೀಕ್ಷಕಿ ಸಂಗಮ್ಮ ಹಿರೇಮಠ ಸಹಿತ ಅನೇಕ ನೌಕರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-35-1279802038

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.