ಕಾರಟಗಿ: ‘ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಕ್ರಮಕ್ಕೆ ಮುಂದಾಗಿ. ಕುಡಿಯುವ ನೀರಿಗಾಗಿ ನಾಲೆಗೆ ನೀರು ಬಿಟ್ಟಿದ್ದು ಸಮರೋಪಾದಿಯಲ್ಲಿ ತುಂಬಿಸಿ’ ಎಂದು ಪುರಸಭೆ ಅಧ್ಯಕ್ಷ ಮಂಜುನಾಥ ಮೇಗೂರು, ಮುಖ್ಯಾಧಿಕಾರಿ ಸಾಬಣ್ಣ ಕಟ್ಟೀಕಾರ ಸ್ಥಳದಲ್ಲಿದ್ದ ಸಿಬ್ಬಂದಿಗೆ ಸೂಚಿಸಿದರು.

ಸಮೀಪದ ನಾಗನಕಲ್ ಬಳಿ ಇರುವ ರಾಜೀವಗಾಂಧಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕೆರೆಗೆ ಅವರು ಭೇಟಿ ನೀಡಿ, ನೀರು ಸಂಗ್ರಹ, ನಿರ್ವಹಣೆ, ಪೂರೈಕೆಯ ಹಂತಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದರು.

ಪಟ್ಟಣದ ಕೆಲ ವಾರ್ಡ್ಗಳಲ್ಲಿ ನೀರು ಪೂರೈಕೆಯಲ್ಲಿ ತೊಂದರೆಯಾಗುತ್ತಿರುವ ಬಗ್ಗೆ ವರದಿಯಾಗಿದೆ. ಪಟ್ಟಣದ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೀರು ಸರಬರಾಜು ಮಾಡಲು ಅಧಿಕಾರಿಗಳು, ಸಿಬ್ಬಂದಿ ಸದಾ ಸನ್ನದ್ಧರಾಗಿರಬೇಕು ಎಂದು ಅವರು ಸೂಚಿಸಿದರು.

ಪಟ್ಟಣದ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ, ಆಹಾರ ತಯಾರಿಕೆ, ಸ್ವಚ್ಚತೆ, ನಿರ್ವಹಣೆ ಪರಿಶೀಲಿಸಿ, ಸಾರ್ವಜನಿಕರಿಂದ ದೂರು ಬಾರದಂತೆ ನೋಡಿಕೊಳ್ಳಿ ಎಂದು ಅಡುಗೆದಾರರಿಗೆ ಮತ್ತು ಅಧಿಕಾರಿಗಳಿಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-35-962837045

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.