ಕಾರಟಗಿ: ಇಲ್ಲಿನ ಪುರಸಭೆ ಅಧ್ಯಕ್ಷ ಮಂಜುನಾಥ ಮೇಗೂರು, ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತ, ಅಧಿಕಾರ ದುರುಪಯೋಗ ಮಾಡಿಕೊಂಡು, ದರ್ಪ ತೋರುತ್ತ ಅಧಿಕಾರಿ, ಸಿಬ್ಬಂದಿ ಮೇಲೆ ಸರ್ವಾಧಿಕಾರತ್ವ ತೋರುತ್ತ ಅವರ ಮನೋಸ್ಥೈರ್ಯ ಕುಗ್ಗಿಸುತ್ತಿದ್ದಾರೆ ಎಂದು ಆರೋಪಿಸಿ ಪುರಸಭೆ ಮುಖ್ಯಾಧಿಕಾರಿ ನೇತೃತ್ವದಲ್ಲಿ ಸಿಬ್ಬಂದಿ, ಪೌರಕಾರ್ಮಿಕರು ಬುಧವಾರ ಪುರಸಭೆ ಕಚೇರಿ ಮುಂಭಾಗದಲ್ಲಿ ಕೆಲಸ ಸ್ಥಗಿತಗೊಳಿಸಿ ಧರಣಿ ನಡೆಸಿದರು.

ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ್ ಹಾಗೂ ಸಿಬ್ಬಂದಿ, ಅಧ್ಯಕ್ಷ ಮಂಜುನಾಥ ಮೇಗೂರು ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿ, ಬೇಕೇ, ಬೇಕು, ನ್ಯಾಯ ಬೇಕು ಎಂದು ಆಗ್ರಹಿಸಿದರು.

‘ಪುರಸಭೆ ಅಧ್ಯಕ್ಷರು ಆಡಳಿತಾತ್ಮಕ ವಿಚಾರದಲ್ಲಿ ಅನಗತ್ಯ ಹಾಗೂ ನಿರಂತರ ಹಸ್ತಕ್ಷೇಪ ಮಾಡುತ್ತಿದ್ದಾರೆ. ಯಾವುದೇ ಕೆಲಸಕ್ಕೂ ತಮ್ಮ ಅನುಮತಿ ಪಡೆಯಬೇಕು ಎಂದು ಅಧಿಕಾರ ಚಲಾಯಿಸುತ್ತ, ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ನಾನು ಹೇಳಿದಂತೆ ಕರ್ತವ್ಯ ನಿರ್ವಹಿಸಬೇಕು. ಇಲ್ಲದಿದ್ದರೆ ಕಾರಟಗಿಯಲ್ಲಿ ಹೇಗೆ ಕೆಲಸ ಮಾಡುತ್ತೀಯ ನೋಡುವೆ. 8 ದಿನಗಳಲ್ಲಿ ನಿಮ್ಮನ್ನು ಏನು ಮಾಡುತ್ತೇನೆ ನೋಡ್ತಿರಿ ಎಂದು ಬೆದರಿಕೆ ಹಾಕಿದರು’ ಎಂದು ಪ್ರತಿಭಟನನಿರತರು ಆರೋಪಿಸಿದರು.

ಮುಖ್ಯಾಧಿಕಾರಿ ಸಾಬಣ್ಣ ಮಾತನಾಡಿ, ಅಧ್ಯಕ್ಷರು ಗೂಂಡಾ ವರ್ತನೆ ತೋರುತ್ತಿದ್ದಾರೆ. ಅಧ್ಯಕ್ಷಗೆ ಪುರಸಭೆ ಬರೆದುಕೊಟ್ಟಂತಾಗಿದೆ. ಇಲ್ಲಿ ಕೆಲಸವೇ ಮಾಡುವುದಿಲ್ಲ. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದೆ. ಸಚಿವ ತಂಗಡಗಿಯವರ ಆಪ್ತ ಸಹಾಯಕ ಹಾಗೂ ಇತರರು ಮುಖ್ಯಾಧಿಕಾರಿಯನ್ನು ಸಮಾಧಾನಪಡಿಸಲು ಯತ್ನಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-35-2103868852

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.