ಕಾರಟಗಿ: ‘ಮುಂದಿನ ಪೀಳಿಗೆಯ ಸ್ವಾಸ್ಥ್ಯಕ್ಕೆ ನಮ್ಮದೇನಾದರೂ ಕೊಡುಗೆ ನೀಡುವುದಿದ್ದರೆ ಪ್ಲಾಸ್ಟಿಕ್ ಬಳಕೆಯನ್ನು ತಕ್ಷಣದಿಂದ ನಿಲ್ಲಿಸಿ. ಸಮುದಾಯ ಈ ನಿರ್ಧಾರ ಕೈಗೊಂಡರೆ ಕಾರಟಗಿ ಪಟ್ಟಣ ಪ್ಲಾಸ್ಟಿಕ್ ಮುಕ್ತವಾಗುವುದರಲ್ಲಿ ಸಂದೇಹವಿಲ್ಲ’ ಎಂದು ಒಂದನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ ಹೇಳಿದರು.

ಪಟ್ಟಣದ ಪುರಸಭೆ ಆವರಣದಲ್ಲಿ ಪುರಸಭೆ ಕಚೇರಿ, ತಾಲ್ಲೂಕು ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಬುಧವಾರ ನಡೆದ ಪ್ಲಾಸ್ಟಿಕ್ ನಿಷೇಧದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪುರಸಭೆ ಅಧ್ಯಕ್ಷ ಮಂಜುನಾಥ ಮೇಗೂರು ಮಾತನಾಡಿ, ಇಂಧೋರ್ಗೆ ಭೇಟಿ ನೀಡಿದಾಗ ಅಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಲುಗಡೆಯಾಗಿರುವುದನ್ನು ಕಂಡು ನಾವೂ ಪ್ಲಾಸ್ಟಿಕ್ ನಿಷೇಧಕ್ಕೆ ಸಂಕಲ್ಪ ಮಾಡಿದ್ದೇವೆ. ನಮ್ಮೊಂದಿಗೆ ಎಲ್ಲಾ ವರ್ಗದ ವರ್ತಕರು, ಸಮುದಾಯ ಕೈಜೋಡಿಸಿದರೆ ಪಟ್ಟಣ ಪ್ಲಾಸ್ಟಿಕ್ ಮುಕ್ತ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.

ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಕಟ್ಟೀಕಾರ್ ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಜಿ.ಬಿ. ಹಳ್ಳಕಾಯಿ, ಪ್ರಧಾನ ಸಿವಿಲ್ ನ್ಯಾಯಾಧೀಶ ನಾಗೇಶ ಪಾಟೀಲ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಮೇಘಾ ಸೋಮಣ್ಣ, ವಕೀಲರ ಸಂಘದ ಅಧ್ಯಕ್ಷ ಶರಣಪ್ಪ ನಾಯಕ, ತಾಲ್ಲೂಕಿನ ವಕೀಲರು, ಸಾರ್ವಜನಿಕರು, ಪುರಸಭೆ ಅಧಿಕಾರಿಗಳು ಇದ್ದರು.ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ನಿರ್ದೇಶಕ ಅಮರೇಶ ಮೈಲಾಪುರ ಕಾರ್ಯಕ್ರಮ ನಿರ್ವಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-35-354893172

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.