ಕಾರಟಗಿ: ‘ಗ್ರಾಮೀಣ ಭಾಗದಲ್ಲಿ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಆಡಳಿತದಲ್ಲಿ ಜನರು ಹೆಚ್ಚು ಭಾಗವಹಿಸಲಿ ಎನ್ನುವ ಉದ್ದೇಶದಿಂದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ ಹೇಳಿದರು.

ಪಟ್ಟಣದ ತಾ.ಪಂ ಕಚೇರಿಯಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಮಹಾತ್ಮ ಗಾಂಧೀಜಿಯವರ ದೂರದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಸ್ಥಳೀಯ ಸ್ವಾಯತ್ತತೆಯನ್ನು ಸಮನ್ವಯಗೊಳಿಸುವ ದೃಷ್ಟಿ ಪಂಚಾಯತ್ ರಾಜ್ ವ್ಯವಸ್ಥೆಯದ್ದಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 24ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಿಸಲಾಗುತ್ತಿದೆ’ ಎಂದರು.

ತಾ.ಪಂ ಇಒ ಲಕ್ಷ್ಮಿ ದೇವಿ ಅವರು ಮಾತನಾಡಿ,‘ ಪಂಚಾಯತ್ ರಾಜ್ ಇಲಾಖೆಯಲ್ಲಿ ಸಾಕಷ್ಟು ಒಳ್ಳೆಯ ಸೌಲಭ್ಯಗಳಿಗೆ. ಅವುಗಳನ್ನು ಸಮರ್ಪಕ ಜನರಿಗೆ ಮುಟ್ಟಿಸುವಲ್ಲಿ ಎಲ್ಲರ ಪಾತ್ರ ಪ್ರಮುಖವಾಗಿದೆ’ ಎಂದರು.

ಕೇಕ್ ಕತ್ತರಿಸಿ ಸಿಹಿ ಹಂಚಿ ದಿನಾಚರಣೆ ಮಾಡಲಾಯಿತು.

ಗ್ರಾಮ ಪಂಚಾಯಿತಿ ಹಂತದಲ್ಲಿ ಕರ ವಸೂಲಿಯಲ್ಲಿ ತಾಲ್ಲೂಕಿನಲ್ಲಿ ಉತ್ತಮ ಸಾಧನೆ ಮಾಡಿದ ಪಿಡಿಒ, ಕರ ವಸೂಲಿಗಾರರು ಹಾಗೂ ಸಾರ್ವಜನಿಕ ಗ್ರಂಥಾಲಯದ ಸೇವೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವ ಪಿಡಿಒ, ಗ್ರಂಥಪಾಲಕರನ್ನು ಸನ್ಮಾನಿಸಲಾಯಿತು.

ಸಹಾಯಕ ನಿರ್ದೇಶಕಿ ವೈ.ವನಜಾ, ಪಿಡಿಒಗಳಾದ ರಾಮು ನಾಯಕ, ಜ್ಯೋತಿ ರೆಡ್ಡಿ, ಸಾಯಿನಾಥ, ಸಲ್ಮಾಂ ಬೇಗಂ, ಪ್ರಕಾಶ ಹಿರೇಮಠ, ವೆಂಕಟೇಶ ನಾಯಕ, ಭಾಗೇಶ್ವರಿ, ಶರಣಮ್ಮ, ನರೇಗಾ ಹಾಗೂ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-35-1179025320

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.