ಕಾರಟಗಿ: ‘ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಗುರುಭವನ ಅಥವಾ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸೂಕ್ತ ಸರ್ಕಾರಿ ನಿವೇಶನ ಮಂಜೂರು ಮಾಡಬೇಕು’ ಎಂದು ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕರು ಬುಧವಾರ ತಹಶೀಲ್ದಾರ್ಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಶಿಕ್ಷಕರ ಸಂಘದ ತಾಲ್ಲೂಕಾಧ್ಯಕ್ಷ ಅಮರೇಶ ಮೈಲಾಪುರ ಮಾತನಾಡಿ, ‘ತಾಲ್ಲೂಕಿನ ಶಿಕ್ಷಕರು ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಆದರೆ ಚಟುವಟಿಕೆ ನಡೆಸಲು ಸ್ವಂತ ಕಟ್ಟಡ ಇಲ್ಲದೇ ಇತರೆ ಕಟ್ಟಡಗಳನ್ನು ಆಶ್ರಯಿಸುವಂತಾಗಿದೆ. ಈ ಎಲ್ಲಾ ತೊಂದರೆಗಳಿಂದ ಮುಕ್ತರಾಗಲು ಸಂಘದ ಗುರುಭವನ ಅಥವಾ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸರ್ಕಾರಿ ಜಾಗೆಯನ್ನು ನೀಡಬೇಕು’ ಎಂದು ಆಗ್ರಹಿಸಿದರು.

‘ಶಿಕ್ಷಕರ ಹಿತದೃಷ್ಟಿಯಿಂದ ಹಾಗೂ ಭವಿಷ್ಯದ ಶೈಕ್ಷಣಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಪಟ್ಟಣದ ವ್ಯಾಪ್ತಿಯಲ್ಲಿ ಲಭ್ಯವಿರುವ ಸರ್ಕಾರಿ ಜಾಗವನ್ನು ಗುರುತಿಸಿ ನೀಡಬೇಕು. ಸೂಕ್ತ ಸ್ಥಳ ನೀಡಿದರೆ ಶಿಕ್ಷಕರ ಸಂಘಕ್ಕೆ ಶಾಶ್ವತ ಮೂಲಸೌಕರ್ಯ ದೊರೆತು, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಲು ಅನುಕೂಲವಾಗುತ್ತದೆ’ ಎಂದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್ ಎಂ.ಕುಮಾರಸ್ವಾಮಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಿಕ್ಷಕರ ಸಂಘದ ಪದಾಧಿಕಾರಿಗಳು ತಿಳಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಶಂಕ್ರಮ್ಮ ಸಜ್ಜನ್, ಸರ್ಕಾರಿ ನೌಕರ ಸಂಘದ ಉಪಾಧ್ಯಕ್ಷ ತಿಮ್ಮಣ್ಣ ನಾಯಕ, ಮುಖ್ಯೋಪಾಧ್ಯಾಯ ಬಸಯ್ಯ ಮಠ, ಶಾಂಸುಂದರ, ಶಿಕ್ಷಕ ರಾಜಶೇಖರ್ ಸಿರವಾರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-35-902044698

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.