ಕಾರಟಗಿ: ತಾಲ್ಲೂಕಿನ ಹುಳ್ಕಿಹಾಳ ಗ್ರಾ.ಪಂ ವ್ಯಾಪ್ತಿಯ ದುಂಡಗಿಕ್ಯಾಂಪ್ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸುವ ಮೂಲಕ ಶಾಲಾ ಆರಂಭೋತ್ಸವವು ಅದ್ದೂರಿಯಾಗಿ ನಡೆಯಿತು. ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿಕೊಳ್ಳಲಾಯಿತು. ಇದೇ ವೇಳೆ ಗ್ರಾಮಸ್ಥರು, ಶಾಲೆಗೆ ಕಾಯಂ ಶಿಕ್ಷಕರನ್ನು ನೇಮಿಸಬೇಕು. ಇಲ್ಲದಿದ್ದರೆ ಜೂನ್ 12ರಂದು ಪ್ರತಿಭಟನೆಯ ಎಚ್ಚರಿಕೆ ನೀಡಿದರು.

ಶಾಲೆಯಲ್ಲಿ 50 ವಿದ್ಯಾರ್ಥಿಗಳಿದ್ದರೂ ಕಾಯಂ ಶಿಕ್ಷಕರಿಲ್ಲ. ಜನಪ್ರತಿನಿಧಿಗಳ, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಪಾಲಕರ, ಶಾಲಾಭಿವೃದ್ಧಿ ಸಮಿತಿಯವರ ಅಸಮಧಾನ ವ್ಯಕ್ತವಾಯಿತು.

ಮೂರ್ನಾಲ್ಕು ವರ್ಷಗಳಿಂದ ನಿಯೋಜನೆಗೊಂಡ, ಅತಿಥಿ ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ. ಕಾಯಂ ಶಿಕ್ಷಕರಿಲ್ಲದೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ. ಶಾಸಕ ಶಿವರಾಜ ತಂಗಡಗಿ ಸೇರಿದಂತೆ ಶಿಕ್ಷಣಾಧಿಕಾರಿಗಳಿಗೆ ಮಾಡಿಕೊಂಡ ಮನವಿಗೆ ಇದೂವರೆಗೂ ಸ್ಪಂದನೆ ದೊರೆತಿಲ್ಲ. ಹೀಗಾಗಿ ಪ್ರತಿಭಟನೆಗಿಳಿಯಲು ನಿರ್ಧರಿಸಿದ್ದೇವೆ ಎಂದು ಪಾಲಕರು ಅಸಮಧಾನ ವ್ಯಕ್ತಪಡಿಸಿದರು. ‘ಶಾಲೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಬಡ ಕೃಷಿ ಕಾರ್ಮಿಕರ ಮಕ್ಕಳು ಇದ್ದಾರೆ. ಹಿಂದೆ ಮಕ್ಕಳಿಂದ ತುಂಬಿ ತುಳುಕುತ್ತಿದ್ದ ಶಾಲೆಯಲ್ಲೀಗ ಕಾಯಂ ಶಿಕ್ಷಕರಿಲ್ಲ ಎಂಬ ಕಾರಣಕ್ಕೆ ಪೋಷಕರು ಮಕ್ಕಳನ್ನು ಬೇರೆ ಶಾಲೆಗೆ ಸೇರಿಸುತ್ತಿದ್ದಾರೆ. ನಿರ್ಲಕ್ಷ್ಯ ಮುಂದುವರಿದರೆ ಶಾಲೆ ಮುಚ್ಚುವ ಪರಿಸ್ಥಿತಿ ಬರುವುದು. ಸರ್ಕಾರಿ ಶಾಲೆ ಮುಚ್ಚುವುದಕ್ಕೆ ನಾವು ಬಿಡುವುದಿಲ್ಲ’ ಎಂದು ಪಾಲಕರು ಹೇಳಿದರು.

ಸಂಬಂಧಿಸಿದ ಅಧಿಕಾರಿಗಳು ಇನ್ನಾದರೂ ಕಾಯಂ ಶಿಕ್ಷಕರನ್ನು ನೇಮಿಸ ಬೇಕು ಎಂದು ಪಾಲಕರು ಆಗ್ರಹಿಸಿದರು.

ಪ್ರಭಾರ ಮುಖ್ಯ ಶಿಕ್ಷಕ ಹೋಮಣ್ಣ, ಎಸ್ಡಿಎಂಸಿ ಉಪಾಧ್ಯಕ್ಷೆ ವೀಣಾ ಬಸವರಾಜ, ಪ್ರಮುಖರಾದ ಶೇಷಪ್ಪ, ಮಲ್ಲಪ್ಪ, ಗಂಗಪ್ಪ, ಯಮನೂರ ಹಿರೇಮನಿ, ಸೋಮನಾಥ ಹಿರೇಮನಿ, ಗವಿಸಿದ್ದಪ್ಪ ಕೊಪ್ಪಳ, ದೇವೇಂದ್ರಪ್ಪ ಹಿರೇಮನಿ, ಮಲ್ಲೇಶ ಸಿಂಗನಾಳ, ಯಮನೂರ ಬೆಣಕಲ್, ಚೌಡಪ್ಪ ಹಿರೇಮನಿ, ತಿಮ್ಮಮ್ಮ ಮೆತ್ತನಾಳ, ಗೌರಮ್ಮ ಕೊಪ್ಪಳ, ಈರಮ್ಮ ಜೂರಟಗಿ ಸಹಿತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-35-2024490905

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.