ಕಾರಟಗಿ: ‘ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದೆ. ಸಮಾಜ ಸೇವೆ, ಕ್ರೀಡೆ, ರಾಜಕೀಯ ಸಹಿತ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಸಮಾನತೆ ಹಾಗೂ ಸಬಲ ಸಮಾಜ ನಿರ್ಮಾಣಕ್ಕೆ ಮಹಿಳೆಯರನ್ನು ಪ್ರೋತ್ಸಾಹಿಸಿ, ಬೆಂಬಲವಾಗಿ ನಿಲ್ಲಬೇಕು’ ಎಂದು ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರೂ ಆದ ಮಾಜಿ ಶಾಸಕ ಬಸವರಾಜ ದಢೇಸೂಗೂರು ಹೇಳಿದರು.

ಬಿಜೆಪಿ ಮಹಿಳಾ ಮೋರ್ಚಾ ಮಂಗಳವಾರ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರತ್ನಕುಮಾರಿ, ಮಂಡಲ ಅಧ್ಯಕ್ಷೆ ಶಿವಲೀಲಾ ಅಯೋಧ್ಯ, ವಕೀಲ ರಾಜೇಶ್ವರಿ ಮಾತನಾಡಿ, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಾ, ಸಮೃದ್ಧ ರಾಷ್ಟ್ರ ಹಾಗೂ ಸಮಾಜ ಕಟ್ಟಲು ತಮ್ಮದೇ ಕೊಡುಗೆ ನೀಡಿದ್ದಾರೆ. ಮಹಿಳೆಯರ ಬಗ್ಗೆ ಅನುಕಂಪ ಬೇಡ, ಅವಕಾಶ ದೊರೆಯಬೇಕಿದೆ ಎಂದರು. ವಿಶೇಷ್ಟ ಸಾಧನೆಗೈದ ರಾಜೇಶ್ವರಿ ಯರಡೋಣಾ, ವೀರಮ್ಮ ಪಲ್ಲೇದ, ತನುಜಾ, ದುರ್ಗಾ ಬಸವಣ್ಣಕ್ಯಾಂಪ್ ಅವರನ್ನು ಸನ್ಮಾನಿಸಲಾಯಿತು. ಬಿಜೆಪಿ ಮಂಡಲ ಅಧ್ಯಕ್ಷ ಮಂಜುನಾಥ ಮಸ್ಕಿ, ದೀಪಾ ಹಿರೇಮಠ, ಪದಾಧಿಕಾರಿಗಳು, ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-35-1497109437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.