ದಿನೇಶ್‌ ಸಾವು ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹ

7

ದಿನೇಶ್‌ ಸಾವು ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹ

Published:
Updated:
Deccan Herald

ಕೊಪ್ಪಳ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ದಿನೇಶ್ ಅವರ ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ವೀರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಅರ್ಜುನ ನಾಯಕ ಆಗ್ರಹಿಸಿದರು.

 ಬುಧವಾರ ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಡಿ.ಗೀತಾ ಅವರಿಗೆ ಮನವಿ ಸಲ್ಲಿಸಿ, ದಿನೇಶ್‌ ಅವರ ಸಾವಿನ ಹಿಂದೆ ಗಣಿ ಮಾಫಿಯಾ ಇದ್ದು, ಸಂಬಂಧಿಸಿದವರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗಣಿಗಾರಿಕೆಗಳು ಮತ್ತು ಮರಳು ದಂಧೆಯ ವಿರುದ್ಧ ದಿನೇಶ್‌ ಅವರು, ದಂಡ ಹಾಕಿ ಸರ್ಕಾರಕ್ಕೆ ಕೋಟಿಗಟ್ಟಲೆ ರಾಜಧನ ಸಂಗ್ರಹಿಸಿ ಕೊಟ್ಟಿದ್ದಾರೆ. ಇಂತಹ ದಕ್ಷ ಅಧಿಕಾರಿಗಳ ಮೇಲೆ ದಾಳಿ ಮಾಡಿರುವ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

 ಇದು ರಾಜಕೀಯ ಪ್ರೇರಿತ ದಾಳಿ ಕೂಡಲೇ ಸಿಐಡಿ ತನಿಖೆಗೆ ವಹಿಸಬೇಕು ಮತ್ತು ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು.  ಮೃತರ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ಒದಗಿಸಿಕೊಡಬೇಕು. ಘಟನೆಯಲ್ಲಿ ಗಾಯಗೊಂಡ ಸಿಬ್ಬಂದಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಗಂಗಾವತಿ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ ಕಳ್ಳಿಮನಿ, ತಾಲ್ಲೂಕು ಕಾರ್ಯದರ್ಶಿ ವೆಂಕಟೇಶ ಯಾದವ್, ಗ್ರಾಮ ಘಟಕದ ಅಧ್ಯಕ್ಷ ಗಂಗಾಧರ.ಪಿ. ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !