ಯಲಬುರ್ಗಾ (ಕೊಪ್ಪಳ ಜಿಲ್ಲೆ): ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಕುಡಗುಂಟಿ ಗ್ರಾಮದ ಹೊರವಲಯದಲ್ಲಿ ಇತ್ತೀಚೆಗೆ ಕಾರ್ಖಾನೆ ನಿರ್ಮಾಣದ ಭೂಮಿಪೂಜೆ ವೇಳೆ ಮತದಾರರಿಗೆ ಹಣದ ಆಮಿಷ ತೋರಿದ ಆರೋಪದ ಮೇಲೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಕ್ಷೇತ್ರದ ಅಭ್ಯರ್ಥಿ ಹರಿ ಆರ್, ಅವರಿಗೆ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.
‘ಪ್ರತಿ ಗ್ರಾಮದಿಂದ 25 ಜನ ಆಧಾರ ಕಾರ್ಡ್‌ನೊಂದಿಗೆ ಬಂದರೆ ₹10 ಸಾವಿರ ಚೆಕ್ ಮೂಲಕ ನೀಡುವುದಾಗಿ’ ಆ ಕಾರ್ಯಕ್ರಮದಲ್ಲಿ ಬ್ಯಾನರ್ ಹಾಕಲಾಗಿತ್ತು.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ಹರಿ ‘ಚುನಾವಣೆ ಘೋಷಣೆಯಾಗುವ ಮೊದಲೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗಣ್ಯರ ದಿನಾಚರಣೆಗೆ ಅಚರಿಸಿ ಗೌರವಿಸುವ ಉದ್ದೇಶಕ್ಕೆ ಗ್ರಾಮಸ್ಥರಿಗೆ ಚೆಕ್ ನೀಡಲು ಉದ್ದೇಶಿಸಲಾಗಿತ್ತು. ಚುನಾವಣೆ ಘೋಷಣೆಯಾಗಿದ್ದಕ್ಕೆ ಇದನ್ನು ಕೈ ಬಿಟ್ಟೆವು’ ಎಂದರು.
ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ 2ರಂದು
ಗಂಗಾವತಿ (ಕೊಪ್ಪಳ ಜಿಲ್ಲೆ): ಗಂಗಾವತಿ ತಾಲ್ಲೂಕಿನ ಮರಳಿ ಗ್ರಾಮದಲ್ಲಿರುವ ರಾಯಲ್ ರಿಚ್ ಕೌಂಟಿ ಹೋಟೆಲ್‌ನಲ್ಲಿ ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಿಜೆಪಿ ಡಿಜಿಟಲ್ ಮಾಧ್ಯಮ ಪ್ರಕೋಷ್ಠದ ವತಿಯಿಂದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ಜರುಗಲಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭಾಗವಹಿಸುವರು. ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳ ಪಕ್ಷದ ಸಾಮಾಜಿಕ ಜಾಲತಾಣಗಳ ಕಾರ್ಯಕರ್ತರಿಗೆ ಪಾಲ್ಗೊಳ್ಳಲು ಅವಕಾಶವಿದೆ ಎಂದು ಪಕ್ಷದ ಜಿಲ್ಲಾ ಮಾಧ್ಯಮ ವಕ್ತಾರ ಮಹೇಶ್ ಅಂಗಡಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.