ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲಬುರ್ಗಾ ವಿಧಾನಸಭಾ ಕ್ಷೇತ್ರ: ಸೀರೆಗಳು ಪತ್ತೆ, ಎಫ್‌ಐಆರ್‌ ದಾಖಲು

Last Updated 17 ಮಾರ್ಚ್ 2023, 22:46 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನರಿಗೆ ಹಂಚಲು ಸೀರೆಗಳನ್ನು ಸಂಗ್ರಹಿಸಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ತಾಲ್ಲೂಕಿನ ಬೇವೂರು ಪೊಲೀಸ್‌ ಠಾಣೆಯಲ್ಲಿ ಬಸವರಾಜ ಕಾಡಾಪೂರ ಎಂಬುವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

‘ಒಟ್ಟು ₹54,750 ಮೌಲ್ಯದ 730 ಸೀರೆಗಳನ್ನು ಪತ್ತೆಯಾಗಿವೆ’ ಎಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕಾವ್ಯಾರಾಣಿ ತಿಳಿಸಿದ್ದಾರೆ.

‘ಗೌರಾ ಗ್ರಾನೈಟ್ ವತಿಯಿಂದ ಮಹಿಳಾ ಸ್ವಸಹಾಯ ಗುಂಪಿನ ಮಹಿಳೆಯರಿಗೆ ಸೀರೆಗಳನ್ನು ವಿತರಿಸಲು ಸಂಗ್ರಹಿಸಿ ಇಡಲಾಗಿತ್ತು’ ಎಂದು ಅವರು ತಿಳಿಸಿದ್ದಾರೆ.

ಕೇಸರಿ ಹಾಗೂ ಕೆಂಪು ಬಣ್ಣಗಳ ಬಟ್ಟೆಯ ಕವರ್‌ ಮೇಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ, ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್‌ ಭಾವಚಿತ್ರ ಹಾಗೂ ಗೌರಾ ಎಂದು ಹೆಸರು ಬರೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT