ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಅತಂತ್ರ ಸರ್ಕಾರ, ಕಾಂಗ್ರೆಸ್‌ಗೆ ನನ್ನ ಬೆಂಬಲ: ಜನಾರ್ದನ ರೆಡ್ಡಿ

Published 13 ಮೇ 2023, 2:28 IST
Last Updated 13 ಮೇ 2023, 2:28 IST
ಅಕ್ಷರ ಗಾತ್ರ

ಕೊಪ್ಪಳ: ‘ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದ್ದು, ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇನೆ’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಲಘು ಹೃದಯಾಘಾತಕ್ಕೆ ಒಳಗಾಗಿರುವ ವಿಧಾನಪರಿಷತ್‌ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಅವರನ್ನು ಇರಕಲ್‌ಗಡ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ರೆಡ್ಡಿ ‘ಕೆಆರ್‌ಪಿಪಿ ಐದರಿಂದ ಆರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಮತ್ತೆ ಬಿಜೆಪಿ ಜೊತೆ ಕೈ ಜೋಡಿಸಲಾರೆ. ಆದ್ದರಿಂದ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದ್ದೇನೆ’ ಎಂದರು.

‘ಬಿಜೆಪಿ ನನಗೆ ಮಾಡಿದ ಮೋಸ ಎಲ್ಲರಿಗೂ ಗೊತ್ತಿದೆ. ಆದ್ದರಿಂದ ಆ ಪಕ್ಷದ ಜೊತೆ ಹೋಗುವುದಿಲ್ಲ. ಗಂಗಾವತಿ ಕ್ಷೇತ್ರದಲ್ಲಿ ನಾನು, ಬಳ್ಳಾರಿ ನಗರದಲ್ಲಿ ನನ್ನ ಪತ್ನಿ ಗೆಲ್ಲುತ್ತೇವೆ’ ಎಂದರು.

‘ಗಂಗಾವತಿ ಶಾಸಕನಾಗಿ ಮಾದರಿ ಕ್ಷೇತ್ರವಾಗಿ ಅಭಿವೃದ್ಧಿ ಪಡಿಸುವೆ. ಅನಧಿಕೃತ ಮನೆಗಳಿಗೆ ಪಟ್ಟಾ ವಿತರಿಸುವೆ. ಇರಕಲ್ಲಗಡ ಹೋಬಳಿ ಅಭಿವೃದ್ಧಿ ಪಡಿಸುವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT