ಕೊಪ್ಪಳ: ಎ.ಪಿ.ಎಲ್. ಬಿ.ಪಿ.ಎಲ್.ಚೀಟಿ ಹಾಗೂ ಆಧಾರ್ ಕಾರ್ಡ್ನಲ್ಲಿನ ವಯಸ್ಸಿನ ಆಧಾರದ ಮೇಲೆ 60 ವರ್ಷ ತುಂಬಿದ ವೃದ್ಧರು, ವಿಧವೆಯರಿಗೆ ಹಾಗೂ ಅಂಗವಿಕಲರಿಗೆ ಸರ್ಕಾರದಿಂದ ನೀಡುವ ಮಾಸಿಕ ವೇತನಗಳು ಜನವರಿಯಿಂದ ತಪ್ಪದೇ ಫಲಾನುಭವಿಗಳ ಮನೆಗಳಿಗೆ ನೇರವಾಗಿ ತಲುಪಿಸಬೇಕು ಎಂದು ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ ಪ್ರಸಾದ ಎನ್. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆ-1 ನಿಂದ ಕೆ-2ಗೆ ವರ್ಗಾವಣೆ ಮತ್ತು ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಪ್ರಕರಣಗಳಲ್ಲಿ ಕಡ್ಡಾಯವಾಗಿ ಶೇ 100 ರಷ್ಟು ಆಧಾರ್ ಜೋಡಣೆ ಮತ್ತು ಭಾಗಶಃ ಪರಿಶೀಲನೆ ನಡೆಸಿ ಕ್ರಮ ವಹಿಸಬೇಕು. ಕಂದಾಯ ಇಲಾಖೆಯ ಅಧಿಕಾರಿಗಳು ಜಿಲ್ಲೆಯ 60 ವರ್ಷ ವಯೋಮಿತಿ ಹೊಂದಿದ ಫಲಾನುಭವಿಗಳನ್ನು ಗುರುತಿಸಿ ಅವರಿಂದ ದಾಖಲೆಗಳನ್ನು ಪಡೆದು ನೇರವಾಗಿ ವೃದ್ಧಾಪ್ಯ ವೇತನ ಮಂಜೂರು ಮಾಡಬೇಕು. ಜಿಲ್ಲೆಯಲ್ಲಿ ಮಾಸಿಕ ಪಿಂಚಣಿಗಳನ್ನು ಸಮಯಕ್ಕೆ ಸರಿಯಾಗಿ ಸಾರ್ವಜನಿಕರಿಗೆ ತೊಂದರೆಯಾಗದಂತೆತಲುಪಿ
ಸುವಂತೆತಹಶೀಲ್ದಾರರಿಗೆ ಸೂಚನೆ ನೀಡಿದರು.

ಪರಿಶಿಷ್ಟ ಜಾತಿಯವರಿಗೆ ರುಧ್ರಭೂಮಿ ಒದಗಿಸಲು ಸರ್ಕಾರದ ಜಾಗ ಇಲ್ಲದಿದ್ದಲ್ಲಿ ಖಾಸಗಿ ಭೂಮಿ ಖರೀದಿಸಿ ಸೌಕರ್ಯ ಒದಗಿಸಬೇಕು. ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಮತ್ತು ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ಸಂಬಂಧ ಪಟ್ಟ ಅಧಿನಿಯಮ-2013 ರನ್ವಯ ಯೋಜನೆಗಳನ್ನು ಕಾರ್ಯರೂಪಕ್ಕೆ ತನ್ನಿ. ಜಿಲ್ಲೆಯಲ್ಲಿರುವ ಬಾಲಕಿಯರ ವಸತಿ ನಿಲಯ, ಅಂಬೇಡ್ಕರ್ ಭವನ ಕಟ್ಟಡ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಆದಷ್ಟು ಬೇಗ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಬೇಕು. ಅಲ್ಲದೇ ನಿರ್ಮಾಣವಾಗುತ್ತಿರುವ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಅಲೆಮಾರಿ, ಅರೆ ಅಲೆಮಾರಿ ಮತ್ತು ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಸಮುದಾಯಗಳಿಗೆ ಭೂಮಿಯನ್ನು ಒದಗಿಸಲು ಯಾವ ರೀತಿ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು. ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಮೇಶ ಮಾತನಾಡಿದರು.

ಜಿಲ್ಲೆಯಲ್ಲಿ ಹಾಸ್ಟೆಲ್ಗಳ ದಿನಗೂಲಿ ನೌಕರರ ಸಂಬಳದ ಸಮಸ್ಯೆಗೆ ಸಂಬಂಧಿಸಿದಂತೆ ಶೀಘ್ರದಲ್ಲಿ ಅನುದಾನ ಬಿಡುಗಡೆ,ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ. ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗಬಾರದು.ಶೀಘ್ರ ದುರಸ್ತಿ ಮಾಡಬೇಕು. ಅಗತ್ಯವಿರುವ ವಿದ್ಯುತ್ ಸಂಪರ್ಕ ಒದಗಿಸಲು ಜೆಸ್ಕಾ ಕ್ರಮ ಕೈಗೊಳ್ಳಬೇಕು. ಬೆಳೆ ವಿಮೆ, ಸಿಸಿ ರಸ್ತೆ ಕಾಮಗಾರಿಸರಿಯಾಗಿ ನಿಭಾಯಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ
ನೀಡಿದರು.

ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ರಘುನಂದನ್ ಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ. ಎಂ.ಪಿ. ಮಾರುತಿ, ಉಪ ಕಾರ್ಯದರ್ಶಿ ಎನ್.ಕೆ ತೊರವಿ, ಜಂಟಿ ಕೃಷಿ ನಿರ್ದೇಶಕಿ ಶಬಾನಾ ಶೇಖ್, ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಡಿ.ಹೆಚ್.ಒ ಡಾ.ಲಿಂಗರಾಜ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಹಶೀಲ್ದಾರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.