ಮಂಗಳವಾರ, ಅಕ್ಟೋಬರ್ 26, 2021
26 °C

ಕೊಪ್ಪಳ: ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಜಿಲ್ಲೆಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ (81) ಸೋಮವಾರ ರಾತ್ರಿ ವಯೋಸಹಜ ಕಾಯಿಲೆಯಿಂದ ನಿಧನರಾದರು.

ಅವರಿಗೆ ಒಬ್ಬ ಪುತ್ರ, ಪುತ್ರಿ ಇದ್ದಾರೆ. ಜನತಾ ಪಕ್ಷದಿಂದ ಪುರಸಭೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ  ರಾಜಕೀಯ ಪ್ರವೇಶಿದರು. ಇವರ ತಂದೆ ಸಂಗಣ್ಣ ಅಗಡಿ ಕೂಡಾ ಸಂಸದರಾಗಿದ್ದರು. ಶಾಸಕರಾಗಿ ಬೊಮ್ಮಾಯಿ ಸರ್ಕಾರದಲ್ಲಿ ವೈದ್ಯಕೀಯ ಸಚಿವರಾಗಿದ್ದರು. ಆದರೆ ಭಿನ್ನಮತದಿಂದ ಸರ್ಕಾರ ಬಿದ್ದು ಎಂಟೇ ದಿನದಲ್ಲಿ ರಾಜೀನಾಮೆ ನೀಡಿದರು.

1989ರಲ್ಲಿ ಸೋಲು ಕಂಡರು. ನಂತರ 2004ರಲ್ಲಿ ಲೋಕಜನಶಕ್ತಿ ಪಕ್ಷದಿಂದ ಸಂಸದರಾಗಿ ಆಯ್ಕೆಯಾದರು. ಗೃಹ ಮಂಡಳಿ  ಅಧ್ಯಕ್ಷರಾಗಿ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಬಿಜೆಪಿ ಸೇರಿದರು ಅವರು ಒಂದು ದಶಕಗಳ ಕಾಲ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು. ಬಿಜೆಪಿಗೆ ಸುಭದ್ರ ನೆಲೆ ಒದಗಿಸುವಲ್ಲಿ ಶ್ರಮಿಸಿದ್ದರು.

ಸಂಜೆ 4 ಕ್ಕೆ ನಗರದ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು