ಮುನಿರಾಬಾದ್ (ಕೊಪ್ಪಳ ಜಿಲ್ಲೆ): ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಸಂಖ್ಯೆ 19 ಕೊಚ್ಚಿ ಹೋಗಿರುವ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡಬಾರದು. ಅದು ಶೋಭೆಯೂ ಅಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಇಲ್ಲಿ ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ಸಂಸದ ಜಗದೀಶ ಶೆಟ್ಟರ್ ಜಲಾಶಯ ವಿಷಯದಲ್ಲಿ ರಾಜಕಾರಣ ಮಾತನಾಡುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಈಗ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಯಾರಾದರೂ ಬರಲಿ, ಸಲಹೆ ನೀಡಲಿ. ಆದರೆ ರಾಜಕಾರಣ ಮಾತನಾಡಬಾರದು ಎಂದರು.

ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದರು. ಟಿ.ಬಿ.ಬೋರ್ಡ್ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರಲಿದ್ದು, ಮೂರು ಅವಧಿಯಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯವರು ಎನು ಮಾಡಿದ್ದಾರೆ?

ಭಾನುವಾರ ಹಗಲು-ರಾತ್ರಿ ತುಂಗಭದ್ರಾ ಜಲಾಶಯದಲ್ಲಿ ನಾನು, ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ್ ಹಾಗೂ ಜಿಂದಾಲ್ ಕಂಪನಿಯ ತಜ್ಞರ ಜತೆಗೆ ನೀರು ಸಂಗ್ರಹಿಸಿ, ಹೇಗೆ ಗೇಟ್ ನಿರ್ಮಾಣ ಮಾಡಬೇಕು ಎನ್ನುವುದರ ಕುರಿತು ಚರ್ಚಿಸಿದ್ದೇವೆ. ಕ್ರಸ್ಟ್ ಗೇಟ್ ತಜ್ಞ ಕನ್ನಯ್ಯ ನಾಯ್ಡು ಹೈದರಾಬಾದ್ ನಿಂದ ಮಧ್ಯಾಹ್ನ ಆಗಮಿಸಲಿದ್ದಾರೆ. ಬಳಿಕ ಮಧ್ಯಾಹ್ನ ಸಭೆ ನಡೆಸುತ್ತೇವೆ ಎಂದರು.
.ತುಂಗಭದ್ರಾ ಅಣೆಕಟ್ಟೆಯಲ್ಲಿ ಅವಘಡ: 19ನೇ ಗೇಟ್ ನೀರುಪಾಲು.ತುಂಗಭದ್ರಾ ಕ್ರಸ್ಟ್ಗೇಟ್ ಕೊಚ್ಚಿ ಹೋದ ಪ್ರಕರಣ: ಕಲ್ಲಿನ ಮಂಟಪ ಭಾಗಶಃ ಮುಳುಗಡೆ.ತುಂಗಭದ್ರಾ ಜಲಾಶಯ: 8 TMC ನೀರು ಖಾಲಿ, ತಾತ್ಕಾಲಿಕ ಸ್ಟಾಪ್ ಲಾಗ್ ಗೇಟ್ ಅಳವಡಿಕೆ?.ತುಂಗಭದ್ರಾ ಜಲಾಶಯಕ್ಕೆ ಗೇಟ್ ಅಳವಡಿಕೆ: JSW ಎಂಜಿನಿಯರ್ಗಳ ಜೊತೆಗೂ ಚರ್ಚೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.