ಗುರುವಾರ , ಜೂನ್ 30, 2022
27 °C

ರಾಜ್ಯದಲ್ಲಿ ಎಎಪಿಗೆ ಉತ್ತಮ ಬೆಂಬಲ: ಲೋಹಿತಕುಮಾರ ರಾಮಶೆಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಬುರ್ಗಾ: ‘ರಾಜ್ಯದಲ್ಲಿಯೂ ದೆಹಲಿ ಮತ್ತು ಪಂಜಾಬ್‌ ಮಾದರಿಯ ಸರ್ಕಾರ ರಚನೆಯಾಗಬೇಕಾದರೆ ಜನರು ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಬೇಕು’ ಎಂದು ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಲೋಹಿತಕುಮಾರ ರಾಮಶೆಟ್ಟಿ ಹೇಳಿದರು.

ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮಾತನಾಡಿ,‘ದೇಶದ ವಿವಿಧೆಡೆ ಎಎಪಿ ಉತ್ತಮ ಆಡಳಿತ ನೀಡುತ್ತಿದೆ. ಭ್ರಷ್ಟಾಚಾರ ರಹಿತ ಪಕ್ಷವಾಗಿರುವ ಎಎಪಿಯನ್ನು ಬೆಂಬಲಿಸಿದರೆ ರಾಜ್ಯವೂ ಅಭಿವೃದ್ಧಿಯಾಗುತ್ತದೆ’ ಎಂದರು.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಎಎಪಿ ಪ್ರಬಲ ಪಕ್ಷವಾಗಿ ರೂಪುಗೊಳ್ಳುತ್ತಿದೆ ಎಂದರು.

ಈಗಾಗಲೇ ಪ್ರತಿಯೊಂದು ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತರು ತಂಡಗಳನ್ನು ರಚಿಸಿ ಸದಸ್ಯತ್ವ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಆಶೋಕ ತಳಕಲ್, ಕೂಕನೂರು ಘಟಕದ ಅಧ್ಯಕ್ಷ ಮಂಜುನಾಥ ಪೂಜಾರ, ಅಮನ್ ಸೇರಿ ಅನೇಕರು ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು