ಕುಕನೂರು: ‘ರಾಜ್ಯ ಸರ್ಕಾರ ಕೂಡಲೇ ಸಂಪೂರ್ಣ ಒಳ ಮೀಸಲಾತಿ ಜಾರಿ ಮಾಡದೇ ವಿಳಂಬ ಮಾಡಿದಲ್ಲಿ ಇಡೀ ರಾಜ್ಯದಾದ್ಯಂತ ಮಾದಿಗ ಸಮುದಾಯ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಭೀಮಗರ್ಜನೆ ಜಿಲ್ಲಾ ಗೌರವ ಅಧ್ಯಕ್ಷ ಶಿವಪ್ಪ ಭಂಡಾರಿ ಹೇಳಿದರು.

‘ಸರ್ಕಾರ ಈಗ ನಡೆಸುತ್ತಿರುವ ನೇಮಕಾತಿಯಲ್ಲಿ ಒಳಮೀಸಲಾತಿ ಕೈ ಬಿಟ್ಟರೆ ಸರ್ಕಾರದ ನಡೆ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ. ಈಗಾಗಲೇ ನಮ್ಮ ಸಮುದಾಯದ ಸಚಿವ ಕೆ.ಎಚ್.ಮುನಿಯಪ್ಪ ಸರ್ಕಾರಕ್ಕೆ ಮಾ.15ರವರೆಗೆ ಗಡುವು ನೀಡಿದ್ದು, ಅಷ್ಟರಲ್ಲಿ ಒಳ ಮೀಸಲಾತಿ ಜಾರಿ ಮಾಡಬೇಕು. ಇಲ್ಲವಾದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಹೇಳಿದ್ದಾರೆ. ಮುಂದೆ ಮಾದಿಗ ಸಮುದಾಯದ ಎಲ್ಲಾ ಸಚಿವರು, ಶಾಸಕರು ರಾಜೀನಾಮೆ ನೀಡಿ ಹೋರಾಟಕ್ಕೆ ಧ್ವನಿಗೂಡಿಸಬೇಕು’ ಎಂದರು.

‘ಸುಪ್ರೀಂಕೋರ್ಟಿನ ತೀರ್ಪಿನ ಅನ್ವಯ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ಮಾಡಿತ್ತು. ಆದರೆ ಈಗ ರೋಸ್ಟರ್ ಸಮಸ್ಯೆ ನೆಪ ಮಾಡಿಕೊಂಡು 56 ಸಾವಿರ ಹುದ್ದೆಗಳ ಭರ್ತಿ ಮಾಡಲು ಹೊರಟಿರುವ ಸರ್ಕಾರ ಒಳ ಮೀಸಲಾತಿ ಇಲ್ಲದೆ ಹಳೆಯ ಮೀಸಲಾತಿ ಅನ್ವಯ ನೇಮಕಾತಿಗೆ ಆದೇಶ ಹೊರಡಿಸಿದೆ. ಇದರಿಂದ ಮಾದಿಗ ಸಮಾಜಕ್ಕೆ ಅನ್ಯಾಯವಾಗಲಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಮಾದಿಗ ಸಮಾಜಕ್ಕೆ ಅನ್ಯಾಯವಾದರೆ ರಾಜ್ಯದಾದ್ಯಂತ ಇಡೀ ಸಮುದಾಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260306-35-1607125092

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.