ಆ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದರು. ಗ್ರಾಮದಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಮೊದಲು ಆ. 20ರ ತನಕ ನಿಷೇಧಾಜ್ಞೆ ಹೇರಲಾಗಿತ್ತು. ಈಗ ಅದನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ.