ಕಾಡುತ್ತಿರುವ ಪೊಳಕಿ ಮರದ ಕೊರತೆ
ಕಿನ್ನಾಳ ಕಲಾಕೃತಿಗಳಿಗೆ ಜಿಎಸ್‌ಟಿ ಇಳಿಕೆ ಹಾಗೂ ಮಾರುಕಟ್ಟೆಯಲ್ಲಿ ದಿಢೀರ್ ಬೇಡಿಕೆ ಹೆಚ್ಚಾಗಿರುವುದು ಒಂದೆಡೆಯಾದರೆ ಅವುಗಳನ್ನು ತಯಾರಿಸಲು ಬೇಕಾಗುವ ಹಗುರವಾದ ಪೊಳಕಿ ಮರದ ಕೊರತೆಯಾಗುತ್ತಿರುವುದು ಕಲಾವಿದರ ಚಿಂತಗೆ ಕಾರಣವಾಗಿದೆ. ಮರಗಳ ಬೆಳವಣಿಗೆಗೆ ಕ್ರಮ ಕೈಗೊಳ್ಳುವಂತೆ ಕಲಾವಿದರು ಒತ್ತಾಯಿಸುತ್ತಲೇ ಬಂದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ‘ಕಿನ್ನಾಳ ಕಲೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆಯಿದೆ. ಮರಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಅರಣ್ಯ ಇಲಾಖೆ ಸಹಯೋಗದಲ್ಲಿ ರಸ್ತೆ ಬದಿಯಲ್ಲಿಯೇ ಪೊಳಕಿ ಮರಗಳನ್ನು ಬೆಳೆಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.