ಕೊಪ್ಪಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ನಗರಸಭೆ ಸಹಯೋಗದಲ್ಲಿ ಇಲ್ಲಿನ ಸಾಹಿತ್ಯ ಭವನದಲ್ಲಿ ನ.3ರಂದು ದೊಡ್ಡಮಟ್ಟದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ತಾಲ್ಲೂಕು ಅಧ್ಯಕ್ಷ ಕರಿಯಪ್ಪ ಮೇಟಿ ತಿಳಿಸಿದರು.

ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಅಂದು ಬೆಳಿಗ್ಗೆ 8.30ಕ್ಕೆ ಪ್ಯಾಟಿ ಈಶ್ವರ ದೇವಸ್ಥಾನದಿಂದ 1500ಕ್ಕೂ ಹೆಚ್ಚು ಜನ ಮಹಿಳೆಯರಿಂದ ಕುಂಭ ಮೆರವಣಿಗೆ ಸಾಹಿತ್ಯ ಭವನದ ತನಕ ಜರುಗಲಿದ್ದು, ಮಧ್ಯಾಹ್ನ 1 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು. ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳುವರು’ ಎಂದು ಹೇಳಿದರು.

‘ಮೂರ್ನಾಲ್ಕು ಸಾವಿರ ಜನ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದರು.

ಸಂಘದ ರಾಜ್ಯಾಧ್ಯಕ್ಷ ಸೋಮನಗೌಡ ಪಾಟೀಲ ಮಾತನಾಡಿ ’ಸಮಾಜದ ಎಲ್ಲ ಸ್ವಾಮೀಜಿಗಳನ್ನು ಒಂದೇ ವೇದಿಕೆಯಲ್ಲಿ ಕರೆದುಕೊಂಡು ಹೋಗುವ ಪ್ರಯತ್ನ ನಡೆಯುತ್ತಿದೆ. ಎಲ್ಲರೂ ಸೇರಿ ಸಮಾಜದ ಏಳಿಗೆಗಾಗಿ ಕೆಲಸ ಮಾಡುತ್ತೇವೆ’ ಎಂದು ತಿಳಿಸಿದರು.

ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಮಂಗಲಾ ಹಂಚಿನಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವರಾಜ ಹಾಲಸಮುದ್ರ, ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಪ್ರತಿಮಾ ಪಟ್ಟಣಶೆಟ್ಟಿ, ನಗರ ಘಟಕದ ಅಧ್ಯಕ್ಷೆ ಸುಜಾತಾ ಪಟ್ಟಣಶೆಟ್ಟಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.