ಕುಕನೂರು: ‘ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆಗಳು ಸಹಕಾರಿ’ ಎಂದು ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯ ರಾಜಶೇಖರ್ ಯು ಅಭಿಪ್ರಾಯಪಟ್ಟರು.
ಇಲ್ಲಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಗುರುವಾರ ನಡೆದ ಕ್ಲಸ್ಟರ್‌ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಮಕ್ಕಳು ದೈಹಿಕವಾಗಿ ಸದೃಢವಾಗಿದ್ದರೆ ಮನಸ್ಸು ಶಾಂತ ಚಿತ್ತತೆಯಿಂದ ಕೂಡಿರುತ್ತದೆ. ಇದರಿಂದ ಜ್ಞಾಪಕ ಶಕ್ತಿ ವೃದ್ಧಿಸುತ್ತದೆ. ಅಲ್ಲದೇ, ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡಲು ಸಹಕಾರಿ ಆಗುತ್ತದೆ. ಶಾಲೆಗಳಲ್ಲಿ ಬರೀ ಪಠ್ಯಕ್ಕೆ ಆದ್ಯತೆ ಕೊಡದೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಗಮನ ನೀಡಿಬೇಕು. ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕು’ ಎಂದು ಸಲಹೆ ನೀಡಿದರು.
ಪ್ರಾಚಾರ್ಯೆ ಜೆ.ಜಯಾ ಮಾತನಾಡಿ, ‘ಮಕ್ಕಳು ಸ್ಪರ್ಧಾ ಮನೋಭಾವನೆಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಯೆಂದರೆ ಸೋಲು, ಗೆಲುವು ಸಹಜ. ಇದನ್ನು ಗಣನೆಗೆ ತೆಗೆದುಕೊಳ್ಳದೇ ಸ್ಪರ್ಧಾ ಮನೋಭಾವನೆಯಿಂದ ಭಾಗವಹಿಸಿರಿ’ ಎಂದು ಮಕ್ಕಳಿಗೆ ಸಲಹೆ ನೀಡಿದರು.
ಕನ್ನಡ ಉಪನ್ಯಾಸಕ ಎಸ್.ಪಿ.ಪೂಜಾರ ಕಾರ್ಯಕ್ರಮ ನಿರೂಪಿಸಿದರು.