ಕೊಪ್ಪಳ: 2026-27ನೇ ಸಾಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿ ದಾಖಲಾತಿಗಾಗಿ ಭಾನುವಾರ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಆದೇಶಿಸಿದ್ದಾರೆ.

ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕೊಪ್ಪಳ ತಾಲ್ಲೂಕಿನಲ್ಲಿ 9, ಗಂಗಾವತಿ ತಾಲ್ಲೂಕಿನಲ್ಲಿ 7, ಕುಷ್ಟಗಿ ತಾಲ್ಲೂಕಿನಲ್ಲಿ 7, ಯಲಬುರ್ಗಾ ತಾಲ್ಲೂಕಿನಲ್ಲಿ 6 ಸೇರಿದಂತೆ ಜಿಲ್ಲೆಯ ಒಟ್ಟು 29 ಕೇಂದ್ರಗಳಲ್ಲಿ ಜರುಗಲಿವೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರ ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-35-1033648471

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.