ಕೊಪ್ಪಳ: ರೈತರು ಡಿಎಪಿ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಜಿ.ಡಿ ಕೃಷ್ಣಮೂರ್ತಿ ಸಲಹೆ ನೀಡಿದ್ದಾರೆ.

ಆಧುನಿಕ ಕೃಷಿಯಲ್ಲಿ ರೈತರು ಸಾವಯವ ಗೊಬ್ಬರಗಳ ಬಳಕೆ ಕಡಿಮೆ ಮಾಡಿ ಕೃತಕ ರಾಸಾಯನಿಕ ಗೊಬ್ಬರಗಳನ್ನು ಶಿಫಾರಸು ಪ್ರಮಾಣಕ್ಕಿಂತ ಹೆಚ್ಚಾಗಿ ಬಳಸುತ್ತಿರುವುದು ಕೃಷಿ ಉತ್ಪಾದನೆ ಹಾಗೂ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ಕೃಷಿ ಚಟುವಟಿಕೆಗಳು ಹಾಗೂ ಬಿತ್ತನೆ ಕಾರ್ಯಗಳು ವೇಗ ಪಡೆದಿವೆ. ರೈತರ ಅನುಕೂಲಕ್ಕಾಗಿ ಅಗತ್ಯ ಪ್ರಮಾಣದ ರಸಗೊಬ್ಬರಗಳನ್ನು ವಿವಿಧ ದಾಸ್ತಾನು ಮಳಿಗೆಗಳಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಆದರೆ ರೈತರು ಒಂದೇ ಬಗೆಯ ರಸಗೊಬ್ಬರಕ್ಕೆ ಅಥವಾ ಒಂದೇ ಸಂಸ್ಥೆಯ ಉತ್ಪನ್ನಗಳಿಗೆ ಆದ್ಯತೆ ನೀಡದೆ, ಪರ್ಯಾಯ ಗೊಬ್ಬರಗಳನ್ನು ಬಳಕೆ ಮಾಡಬೇಕು ಎಂದು ಹೇಳಿದ್ದಾರೆ.

'ಯೂರಿಯಾ ಹಾಗೂ ಡಿಎಪಿ ರಸಗೊಬ್ಬರಗಳಿಗೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳ ಬಳಕೆ ಹೆಚ್ಚು ಪರಿಣಾಮಕಾರಿ ಆಗಲಿದೆ. ಮೆಕ್ಕೆಜೋಳ, ಹೆಸರು, ತೊಗರಿ, ಸಜ್ಜೆ, ಭತ್ತ, ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಶಿಫಾರಸು ಮಾಡಲಾಗಿದೆ. ನ್ಯಾನೋ ಯೂರಿಯಾ ಬಳಕೆಯಿಂದ ಪೋಷಕಾಂಶಗಳ ಸಮತೋಲನ ಸಾಧ್ಯವಾಗುತ್ತದೆ. ಸಂಯುಕ್ತ ರಸಗೊಬ್ಬರಗಳಲ್ಲಿ ಪೊಟ್ಯಾಷ್ ಹಾಗೂ ಗಂಧಕದ ಅಂಶಗಳು ಇರುವುದರಿಂದ ಬೆಳೆಗಳ ಬೇರುಗಳ ಬೆಳವಣಿಗೆ ಉತ್ತಮಗೊಳ್ಳುತ್ತದೆ. ಉತ್ತಮ ಇಳುವರಿ ಪಡೆಯಲು ಸಹಕಾರಿಯಾಗುತ್ತದೆ. ಹೀಗಾಗಿ ರೈತರು ಸಮತೋಲನ ರಸಗೊಬ್ಬರಗಳ ಬಳಕೆಗೆ ಆದ್ಯತೆ ನೀಡಬೇಕು’ ಎಂದು ಅವರು ಹೇಳಿದ್ದಾರೆ.

‘ರೈತರು ಕಡ್ಡಾಯವಾಗಿ ಎಫ್.ಐ.ಡಿ ಸಂಖ್ಯೆ ಹೊಂದಿರಬೇಕು. ಆಧಾರ್ ಕಾರ್ಡ್ ಪ್ರತಿಯನ್ನು ಹಾಗೂ ಒಟಿಪಿ ಸ್ವೀಕರಿಸಲು ಮೊಬೈಲ್ ಫೋನ್ ಕಡ್ಡಾಯವಾಗಿ ಕೊಂಡೊಯ್ಯಬೇಕು’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-35-1094658525

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.