ಕೊಪ್ಪಳ: ‘ಬಿ.ಆರ್. ಅಂಬೇಡ್ಕರ್ ಅವರು ಶಿಕ್ಷಣವನ್ನು ಸಮಾಜದ ಉದ್ಧಾರಕ್ಕೆ ಮತ್ತು ವ್ಯಕ್ತಿಯ ವ್ಯಕ್ತಿತ್ವ ವಿಕಸನಕ್ಕೆ ಇರುವ ಅತ್ಯಂತ ಶಕ್ತಿಶಾಲಿ ಅಸ್ತ್ರವೆಂದು ಪರಿಗಣಿಸಿದ್ದರು. ಸಮಸಮಾಜದ ಪ್ರತಿರೂಪವೇ ಅಂಬೇಡ್ಕರ್ ಆಗಿದ್ದರು’ ಎಂದು ಬಿಜೆಪಿ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ ಹೇಳಿದರು.

ತಾಲ್ಲೂಕಿನ ಹಿರೇಬಗನಾಳ ಗ್ರಾಮದಲ್ಲಿ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಸೋಮವಾರ ನಡೆದ ಕಂಚಿನ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಶಿಕ್ಷಿತರಾಗಿ, ಸಂಘಟಿತರಾಗಿ, ಹೋರಾಡಬೇಕು ಎನ್ನುವುದು ಅವರ ಪ್ರಸಿದ್ಧ ಕರೆಯಾಗಿತ್ತು. ಶಿಕ್ಷಣವು ಸಾಮಾಜಿಕ ಬದಲಾವಣೆಯ ಮತ್ತು ಅನ್ಯಾಯದ ವಿರುದ್ಧ ಹೋರಾಡುವ ಮೊದಲ ಹೆಜ್ಜೆಯಾಗಿದೆ’ ಎಂದರು.

ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ ’ಅಂಬೇಡ್ಕರ್ ನಮ್ಮೆಲ್ಲರ ಬೆಳವಣಿಗೆಯ ಶಿಲ್ಪಿ, ನಾವೆಲ್ಲರೂ ಅವರ ಹಾದಿಯಲ್ಲಿ ನಡೆದು ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಬದುಕನ್ನು ಕಟ್ಟಿಕೊಂಡು ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಬೇಕು’ ಎಂದು ಕರೆ ನೀಡಿದರು.

ಶಾಸಕ ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್, ಪೂರ್ಣಾನಂದ ಭಾರತಿ ಸ್ವಾಮೀಜಿ, ಗದ್ದಿಗೆಪ್ಪ ಅಜ್ಜನವರು,ಮುಖಂಡರಾದ ವೆಂಕಟೇಶ್ ಬಾರಕೇರಿ, ಗೂಳಪ್ಪ ಹಲಗೇರಿ, ಗಣೇಶ ಹೊರತಟ್ನಾಳ, ಮಲ್ಲಿಕಾರ್ಜುನ ಪೂಜಾರ, ರವಿ ದೇವರಮನೆ, ಪಕೀರಪ್ಪ ದೊಡ್ಡಮನಿ, ಶಿವಣ್ಣ ತಾಳಕನಕಪುರ, ಗವಿಸಿದ್ದಪ್ಪ ಹಿರೇಬಗನಾಳ, ಯುವರಾಜ ಹೊಸಮನಿ, ಸಾಗರ ದೊಡ್ಡಮನಿ, ನಾಗರಾಜ ಪೂಜಾರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-35-1108325985

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.