ಕಾರಟಗಿ: ಈಶಾನ್ಯ ರಾಜ್ಯದ ಮಣಿಪುರದಲ್ಲಿ ಕೇಂದ್ರೀಯ ಮೀಸಲು ಪಡೆಯಲ್ಲಿ (ಸಿಆರ್ಪಿಎಫ್) ಯೋಧರಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ ಲಿಂಗಪ್ಪ ಗೋಡಿ (55) ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾದರು. ಅವರ ಅಂತ್ಯಕ್ರಿಯೆ ಗುರುವಾರ ಪಟ್ಟಣದಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ಹೃದಯಾಘಾತ ಸಂಭವಿಸಿದಾಗ ಅವರನ್ನು ಮಣಿಪುರದ ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಲಿಲ್ಲ.

1991ರಲ್ಲಿ ಸೇನೆಗೆ ಸೇರ್ಪಡೆಗೊಂಡಿದ್ದ ಅವರು ಯಲಹಂಕದಲ್ಲಿ ಸಿಆರ್ಪಿಎಫ್ ಪೊಲೀಸ್ ನಂತರ ಹವಾಲ್ದಾರ್, ಎಎಸ್ಐ ಆಗಿ, ಜಮ್ಮು ಕಾಶ್ಮೀರ ಸೇರಿದಂತೆ 20 ರಾಜ್ಯಗಳಲ್ಲಿ ಕಳೆದ 35 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಸದ್ಯ ಮಣಿಪುರದಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರಿಗೆ ತಂದೆ, ತಾಯಿ, ಸಹೋದರರು ಹಾಗೂ ಸಹೋದರಿ ಯರು ಸೇರಿ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ಸೇನಾ ಗೌರವದೊಂದಿಗೆ ಸನ್ಮಾನ: ಪಾರ್ಥಿವ ಶರೀರ ಬರುವ ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣದ ನಿವಾಸಿಗಳು ಸೇರಿದಂತೆ ನೂರಾರು ಯುವಕರು, ಗೆಳೆಯರು, ಹಿತೈಷಿಗಳು ಪುರಸಭೆ ಕಾರ್ಯಾಲಯದ ಮುಂದೆ ಜಮಾವಣೆಗೊಂಡಿದ್ದರು. ಪುರಸಭೆ ಅಧ್ಯಕ್ಷ ಮಂಜುನಾಥ ಮೇಗೂರು ಹಾಗೂ ಸದಸ್ಯರು, ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ, ಕಂದಾಯ ಇಲಾಖೆ ಅಧಿಕಾರಿಗಳು, ಇನ್ಸ್ಪೆಕ್ಟರ್ ಸುಧೀರಕುಮಾರ್ ಬೆಂಕಿ ಸೇರಿದಂತೆ ವಿವಿಧ ಇಲಾಖೆ ಸಿಬ್ಬಂದಿ ಪುರಸಭೆ ಕಾರ್ಯಾಲಯದಿಂದ ಪಾರ್ಥಿವ ಶರೀರ ಹೊತ್ತೊಯ್ಯುತ್ತಿದ್ದ ವಾಹನದ ಹಿಂದೆ ಮನೆಯವರೆಗೆ ತೆರಳಿದರು. ಯೋಧರ ಪಾರ್ಥೀವ ಶರೀರ ಮನೆಗೆ ತಲುಪುತ್ತಿದ್ದಂತೆ ಕುಟುಂಬಸ್ಥರ ಹಾಗೂ ಬಂಧುಗಳ ಆಕ್ರಂದನ ಮುಗಿಲು ಮುಟ್ಟಿತ್ತು. ನಂತರ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಯುವ ಮುಖಂಡರಾದ ಶಶಾಂಕ ತಂಗಡಗಿ, ಮೌನೇಶ ದಢೇಸೂಗೂರು, ಚನ್ನಬಸಪ್ಪ ಸುಂಕದ್, ವಿಶೇಷ ಎಪಿಎಂಸಿ ಮಾಜಿ ಅಧ್ಯಕ್ಷ ಶಶಿಧರಗೌಡ ಪಾಟೀಲ, ಜಿ.ಪಂ ಮಾಜಿ ಅಧ್ಯಕ್ಷ ಅಮರೇಶ ಕುಳಗಿ, ಪುರಸಭೆ ಮಾಜಿ ಅಧ್ಯಕ್ಷ ಶರಣೇಶ ಸಾಲೋಣಿ, ಉದ್ಯಮಿ ವೀರೇಶಪ್ಪ ಚಿನಿವಾಲ ಸೇರಿ ಹಲವರು ಯೋಧರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ದರ್ಶನ ಪಡೆದರು.

ಪಟ್ಟಣದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-35-1836225680

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.