ಕೊಪ್ಪಳ: ‘ನಾವೆಲ್ಲರೂ ಸೇರಿ ಪ್ರೀತಿ, ವಿಶ್ವಾಸ, ಸೌಹಾರ್ದತೆಯಿಂದ ಬಕ್ರೀದ್ ಆಚರಿಸೋಣ’ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ ಇಟ್ನಾಳ ಸಾರ್ವಜನಿಕರಿಗೆ ಹೇಳಿದರು.

ಜಿಲ್ಲಾಡಳಿತದ ಭವನದಲ್ಲಿನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಸೋಮವಾರ ಬಕ್ರೀದ್ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು ‘ದೇವರ ಉಪಾಸನಾ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಸಂವಿಧಾನಬದ್ಧವಾಗಿ ಲಭಿಸಿದೆ. ಆದ್ದರಿಂದ ಸಾರ್ವಜನಿಕರ ಹಿತಾಸಕ್ತಿಗೆ ಧಕ್ಕೆ ಬಾರದಂತೆ ಶಾಂತಿ, ಪ್ರೀತಿಯಿಂದ ಹಬ್ಬ ಆಚರಣೆ ಮಾಡಬೇಕು. ವದಂತಿಗಳಿಗೆ ಕಿಡಿಗೊಡಬಾರದು. ಏನೇ ಸಮಸ್ಯೆ ಇದ್ದರೂ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು’ ಎಂದರು.

ಎಸ್ಪಿ ಡಾ.ರಾಮ್ ಎಲ್ ಅರಸಿದ್ದಿ ಮಾತನಾಡಿ ‘ ಯಾರಾದರೂ ಗೋವುಗಳನ್ನು ಸಾಗಿಸುವುದು ಕಂಡಲ್ಲಿ ಆ ಬಗ್ಗೆ ಕೂಡಲೇ 112 ಸಹಾಯವಾಣಿಗೆ ಮಾಹಿತಿ ನೀಡಬೇಕು. ಸಾಮಾಜಿಕ ಜಾಲತಾಣಗಳಲ್ಲಿನ ಉಹಾಪೋಹಗಳಿಗೆ ಕಿವಿಗೊಡಬಾರದು’ ಎಂದರು.

ಮುಖಂಡರಾದ ಯಮನೂರಪ್ಪ ನಾಯಕ, ಎಸ್.ಬಿ.ಖಾದ್ರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ, ಸಹಾಯಕ ಆಯುಕ್ತ ಮಹೇಶ ಮಾಲಗಿತ್ತಿ ಸೇರಿ ಅನೇಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-35-1167549442

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.