ಕೊಪ್ಪಳ: ತಾಲ್ಲೂಕಿನ ಬಸಾಪುರ ಕೆರೆಯನ್ನು ಜನ ಜಾನುವಾರುಗಳಿಗೆ ಮುಕ್ತವಾಗಿಡಲು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರಿಗೆ ಇತ್ತೀಚೆಗೆ ಮನವಿ ಸಲ್ಲಿಸಲಾಯಿತು.

ಗಿಣಿಗೇರಿ ಹಾಗೂ ಹಿರೇಬಗನಾಳ ಗ್ರಾಮದ ಸುತ್ತಲೂ ತಲೆ ಎತ್ತಿ ನಿಂತಿರುವ ಬೃಹತ್ ಕಾರ್ಖಾನೆಗಳು ಹೊರ ಸೂಸುವ ರಾಸಾಯನಿಕ ಮಿಶ್ರಿತ ಹೊಗೆ ಹಾಗೂ ದೂಳಿನಿಂದಾಗಿ ಜಿಲ್ಲೆಯ ಜನ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕಾರ್ಖಾನೆಗಳಿಂದ ಉಂಟಾದ ಪರಿಸರ ಮಾಲಿನ್ಯದಿಂದಾಗಿ ಸಾಕಷ್ಟು ಜನ ಜಾನುವಾರುಗಳು ಮೃತಪಟ್ಟಿವೆ. ಇದನ್ನು ಸರಿಪಡಿಸಬೇಕು ಹಾಗೂ ಬಸಾಪುರ ಕೆರೆಯನ್ನು ಮುಕ್ತ ಮಾಡಬೇಕು ಎಂದರು.

ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖ್ಯ ಸಂಚಾಲಕ ಬಸವರಾಜ ಶೀಲವಂತರ, ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ.ಗಫಾರ್, ಗಿಣಿಗೇರಾ ನಾಗರಿಕ ಹೋರಾಟ ಸಮಿತಿ ಸಂಚಾಲಕ ಮಂಗಳೇಶ ರಾಥೋಡ್, ಕುರಿಗಾರರ ಸಂಘದ ಅಧ್ಯಕ್ಷ ಯಮನೂರಪ್ಪ ಹಾಲಳ್ಳಿ, ಮುಖಂಡರಾದ ಬೀರಪ್ಪ ಶಹಾಪುರ, ಕಂಪ್ಲೆಪ್ಪ ಶಹಾಪುರ, ಚನ್ನಬಸಪ್ಪ ಅಪ್ಪಣವರ. ಮುತ್ತುರಾಜ್ ಚನ್ನದಾಸರರ ಮೌಲಾ ಹುಸೇನ್ ಹಣಗಿ, ಶಿವಪ್ಪ ಹಡಪದ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-35-1287317672

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.