ಕೊಪ್ಪಳ: ಪ್ರಸ್ತುತ ಬಲ್ಡೋಟ ಕಂಪನಿಯ ಆವರಣದಲ್ಲಿರುವ ಬಸಾಪುರ ಕೆರೆಯನ್ನು ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಬಲ್ಡೋಟ ಮುಂಭಾಗದ ಮುಖ್ಯರಸ್ತೆಯ ಬದಿಯಲ್ಲಿ ಧರಣಿ ಆರಂಭಿಸಿದೆ. ಧರಣಿ ಶುಕ್ರವಾರ ಮೂರು ದಿನಗಳನ್ನು ಪೂರ್ಣಗೊಳಿಸಿತು.

ನಮ್ಮ ಕೆರೆ ನಮ್ಮ ಹಕ್ಕು ದಾರಿ ಬಿಡಿ, ಕೆರೆ ಮುಕ್ತಗೊಳಿಸಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು. ಸಂಘದ ರಾಜ್ಯ ಪ್ರಮುಖರು ಎರಡು ದಿನಗಳ ಹಿಂದೆ ಕಂಪನಿಯ ಮುಂಭಾಗದಲ್ಲಿ ದೊಡ್ಡಮಟ್ಟದಲ್ಲಿ ಹೋರಾಟ ನಡೆಸಿದ್ದರು. ಅದರ ಮುಂದುವರಿದ ಭಾಗವಾಗಿ ಸಂಘಟನೆಯ ಜಿಲ್ಲಾಸಮಿತಿಯಿಂದ ಧರಣಿ ಆರಂಭಿಸಲಾಗಿದೆ.

ಸಂಘದ ಜಿಲ್ಲಾಧ್ಯಕ್ಷ ಭೀಮಸೇನ ಕಲಕೇರಿ, ಜಿಲ್ಲಾ ಕಾರ್ಯಾಧ್ಯಕ್ಷ ಕನಕಪ್ಪ ಪೂಜಾರಿ ಇಂದರಗಿ, ಮೂಕಪ್ಪ ಮೇಸ್ತ್ರಿ, ಯಮನೂರಪ್ಪ ಬಸಾಪುರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

190ನೇ ದಿನ ಹೋರಾಟ: ಪರಿಸರಕ್ಕೆ ಮಾಲಿನ್ಯ ಉಂಟು ಮಾಡುತ್ತಿರುವ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ಜಿಲ್ಲಾ ಬಚಾವೊ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ನಗರದಲ್ಲಿ ನಡೆಸುತ್ತಿರುವ ಧರಣಿ ಶುಕ್ರವಾರ 190 ದಿನಗಳನ್ನು ಪೂರ್ಣಗೊಳಿಸಿತು. ಕಾರ್ಖಾನೆಗಳ ಮಾಲಿನ್ಯ ನಿಯಂತ್ರಣವಾಗಬೇಕು, ವಿಸ್ತರಣೆಗೆ ಯಾರಿಗೂ ಅವಕಾಶ ಕೊಡಬಾರದು ಎಂದು ಧರಣಿ ನಿರತರು ಆಗ್ರಹಿಸಿದರು.

ಧರಣಿಯಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಸಂಚಾಲಕ ಮಲ್ಲಿಕಾರ್ಜುನ ಬಿ. ಗೋನಾಳ, ಮಂಜುನಾಥ ಜಿ. ಗೊಂಡಬಾಳ, ನಿವೃತ್ತ ಉಪನ್ಯಾಸಕ ಶಂಭುಲಿಂಗಪ್ಪ ಹಲಗೇರಿ, ರಾಜಶೇಖರ ಏಳುಬಾವಿ, ಮೂಕಪ್ಪ ಮೇಸ್ತ್ರಿ ಬಸಾಪುರ, ಯಮನೂರಪ್ಪ ಹಾಲಳ್ಳಿ ಬಸಾಪುರ, ಸುಭಾನ ಸಾಬ್ ನೀರಲಗಿ, ಶಿವಾನಂದಯ್ಯ ಬೀಳಗಿಮಠ, ಮಹಾದೇವಪ್ಪ ಮಾವಿನಮಡು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-35-1441084343

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.