ಕೊಪ್ಪಳ: ಪರಿಸರಕ್ಕೆ ಮಾಲಿನ್ಯ ಉಂಟು ಮಾಡುತ್ತಿರುವ ಕಾರ್ಖಾನೆಗಳನ್ನು ವಿರೋಧಿಸಿ ಜಿಲ್ಲಾ ಬಚಾವೊ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ನಡೆಸುತ್ತಿರುವ ಹೋರಾಟದ ಭಾಗವಾಗಿ ಬೆಂಗಳೂರು ಚಲೊ ನಡೆಸಲು ನಿರ್ಧರಿಸಲಾಗಿದೆ.

ಈ ಕುರಿತು ಚರ್ಚಿಸಲು ನಗರದ ಮಹಾಂತಯ್ಯನ ಮಠ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಸಿದ್ಧತಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಂಟಿ ಕ್ರಿಯಾ ವೇದಿಕೆ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು.

‘ಮುಂದಿನ ಹೋರಾಟದ ರೂಪುರೇಷೆ ತಯಾರಿಸಲು ಸಭೆ ಕರೆಯಲಾಗಿದೆ. ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದರು.

ಈಗಿರುವ ಕಾರ್ಖಾನೆಗಳ ಮಾಲಿನ್ಯ ಹಾಗೂ ವಿಸ್ತರಣೆಗೆ ಮುಂದಾಗಿರುವ ಬಲ್ಡೋಟ, ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ ಸುಮಿ, ಅಲ್ಟ್ರಾಟೆಕ್ ಸಿಮೆಂಟ್, ಎಕ್ಸ್ಇಂಡಿಯಾ, ಭದ್ರಶ್ರೀ ಸ್ಟೀಲ್ ನಡೆ ವಿರೋಧಿಸಿ ಧರಣಿ ನಡೆಯುತ್ತಿದೆ.

ಹೋರಾಟ: ಬುಧವಾರ 'ಹೊಸತು' ಪತ್ರಿಕೆಯ ಸಂಪಾದಕ ಸಿದ್ದನಗೌಡ ಪಾಟೀಲ್ ಅವರು ಕಾರ್ಖಾನೆ ಬಾಧಿತ ಹಿರೇಬಗನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿ ‘ಸುದೀರ್ಘ ಕಾಲದಿಂದ ಹೋರಾಟ ಮಾಡುವದು ಸಣ್ಣ ಸಂಗತಿಯಲ್ಲ. ಇಲ್ಲಿ ನಡೆಸಿರುವ ಹೋರಾಟ ಪರಿಸರ ಸಾಮಾಜಿಕ, ಜೀವ ಕಳಕಳಿಯ ಪ್ರತೀಕವಾಗಿದೆ. ಬಾಧಿತ ಪ್ರದೇಶದ ಪರಿಸರ ಹಾಳಾಗಿದೆ. ಜನರ ಆರೋಗ್ಯ ಹಾಳಾಗಿದೆ. ಈ ಪರಿಸ್ಥಿತಿಯಲ್ಲಿ ಉದ್ಯೋಗ ಕುರಿತು ಮಾತನಾಡುವುದು ಸೂಕ್ತವಲ್ಲ’ ಎಂದರು.

ಕರ್ನಾಟಕ ರೈತ ಸಂಘ (ಎಐಯುಕೆಎಸ್) ರಾಜ್ಯಾಧ್ಯಕ್ಷ ಡಿ.ಎಚ್. ಪೂಜಾರ, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಮಹಾಂತೇಶ ಕೊತಬಾಳ, ಮಂಜುನಾಥ ಜಿ. ಗೊಂಡಬಾಳ, ವಿಜಯ ಮಹಾಂತೇಶ ಹಟ್ಟಿ, ಎಸ್.ಬಿ.ರಾಜೂರು, ಮೂಕಪ್ಪ ಮೇಸ್ತ್ರಿ ಬಸಾಪುರ, ಜಿ.ಬಿ.ಪಾಟೀಲ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.