ಅಳವಂಡಿ: ಹೋಬಳಿ ವ್ಯಾಪ್ತಿಯ ಬೆಟಗೇರಿ ಗ್ರಾಮವು ದೊಡ್ಡ ಗ್ರಾಮವಾಗಿದ್ದು, ಜನಪ್ರತಿನಿಧಿಗಳ, ಅಧಿಕಾರಿಗಳ ಇಚ್ಚಾಶಕ್ತಿ ಕೊರತೆಯಿಂದ ಪದವಿ ಪೂರ್ವ ಶಿಕ್ಷಣ ಪಡೆಯಲು ಉತ್ತಮ ವ್ಯವಸ್ಥೆ ಇಲ್ಲದೇ ಉನ್ನತ ಶಿಕ್ಷಣ ಕನಸು ವಿದ್ಯಾರ್ಥಿಗಳ ಪಾಲಿಗೆ ಗಗನ ಕುಸುಮವಾಗಿದೆ.

ಕೊಪ್ಪಳ ತಾಲ್ಲೂಕಿನ ಬೆಟಗೇರಿ ಗ್ರಾಮವು ಜಿಲ್ಲಾ ಕೇಂದ್ರದಿಂದ 30 ಕಿ.ಮೀ ದೂರದಲ್ಲಿದೆ. ಬೆಟಗೇರಿ ಗ್ರಾಮದಲ್ಲಿ ಅಂಗನವಾಡಿ ಯಿಂದ ಪ್ರೌಢಶಾಲೆಯವರೆಗೂ ಶಿಕ್ಷಣ ಇದೆ. ಈ ಗ್ರಾಮದಲ್ಲಿ 1966ರಲ್ಲಿ ಪ್ರೌಢ ಶಾಲೆ ಪ್ರಾರಂಭವಾಗಿದೆ. ಪ್ರೌಢಶಾಲೆ ಪ್ರಾರಂಭವಾಗಿ 60 ವರ್ಷವಾದರೂ ಪಿಯು ಕಾಲೇಜು ಆಗಿಲ್ಲ.

ಬೆಟಗೇರಿ ಗ್ರಾಮದಲ್ಲಿ ಪ್ರೌಢಶಾಲೆ ಮುಗಿಸಿದ ಬಳಿಕ ಪಿಯು ಶಿಕ್ಷಣಕ್ಕೆ ಅಳವಂಡಿ, ಕೊಪ್ಪಳ, ಮುಂಡರಗಿ ನಗರಕ್ಕೆ ಹೋಗುವುದು ಅನಿವಾರ್ಯವಾಗಿದೆ. ಅಳವಂಡಿಯಲ್ಲಿ ಕಲಾ ಕಾಲೇಜು ಅಷ್ಟೇ ಇದೆ. ವಿಜ್ಞಾನ ಹಾಗೂ ವಾಣಿಜ್ಯ ಶಿಕ್ಷಣ ಪಡೆಯಲು ಗದಗ ಜಿಲ್ಲೆ ಮುಂಡರಗಿ ಹಾಗೂ ಕೊಪ್ಪಳಕ್ಕೆ ಹೋಗಬೇಕಿರುವ ಅನಿವಾರ್ಯತೆ ವಿದ್ಯಾರ್ಥಿಗಳಲ್ಲಿ ಇದೆ.

ಎಸ್ಎಸ್ಎಲ್ಸಿ ಮುಗಿದಾಕ್ಷಣ ಬಹಳಷ್ಟು ವಿದ್ಯಾರ್ಥಿಗಳು ಸೌಲಭ್ಯಗಳ ಕೊರತೆ ಕಾರಣ ವಿದ್ಯಾಭ್ಯಾಸ ಮೊಟಕುಗೊಳಿಸುವ ಸಾಧ್ಯತೆಯೂ ಇದೆ. ಇದರಿಂದ ಹೆಣ್ಣು ಮಕ್ಕಳಿಗೆ ಪಿಯು ಶಿಕ್ಷಣಕ್ಕೆ ನಗರಕ್ಕೆ ಪ್ರದೇಶಕ್ಕೆ ಕಳಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ದೂರದ ಕಾಲೇಜುಗಳಿಗೆ ಕಳುಹಿಸಲು ಮನಸ್ಸು ಮಾಡುವುದಿಲ್ಲ. ನಗರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಸೇರಿದಂತೆ ಅನೇಕ ತೊಂದರೆಗಳಿವೆ.

ನೂತನ ಪಿಯು ಕಾಲೇಜಿಗೆ ಸುಸಜ್ಜಿತವಾದ ಜಾಗ, ಮೈದಾನ ಇದೆ. ಈಗೀನ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ. ಸರ್ಕಾರಿ ಪಿಯು ಕಾಲೇಜು ಆರಂಭ ಮಾಡಿದರೆ, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿದೆ. ಸುತ್ತಮುತ್ತ ಗ್ರಾಮದ ವಿದ್ಯಾರ್ಥಿಗಳಿಗೆ ಅನುಕೂಲವಾಗುವುದು ಎಂಬುದು ಗ್ರಾಮದ ಶಿಕ್ಷಣ ಪ್ರೇಮಿಗಳ ಅಭಿಲಾಷೆ.

ಶಾಸಕರು ಶಿಕ್ಷಣಕ್ಕೆ ಒತ್ತು ನೀಡಲಿ: ‘ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಅವರು ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡುವ ಕೆಲಸ ಮಾಡಬೇಕು. ಬೆಟಗೇರಿಗೆ ಪಿಯು ಕಾಲೇಜು, ಬಿಸಿಎಂ ವಸತಿ ನಿಲಯ ಸೇರಿದಂತೆ ಶಿಕ್ಷಣಕ್ಕೆ ಅನೇಕ ಸೌಲಭ್ಯ ಒದಗಿಸಬೇಕು. ಈ ಶೈಕ್ಷಣಿಕ ವರ್ಷದಿಂದ ಶಾಸಕರ ಅನುದಾನದಲ್ಲಿ ಆದರೂ ಕಾಲೇಜು ಆರಂಭಿಸಬೇಕು’ ಎಂಬುದು ಬೆಟಗೇರಿ ಗ್ರಾಮಸ್ಥರ ಒತ್ತಾಯವಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-35-847486565

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.